ಕುಂದಾಪುರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಕರಾವಳಿಗೆ ತೆರಳುವ ಪ್ರಯಾಣಿಕರಿಗಾಗಿ ವಿಶೇಷ ರೈಲಿನ ವೇಳಾಪಟ್ಟಿ ಬಿಡುಗಡೆಯಾಗಿದೆ.
ಬೆಂಗಳೂರಿನಿಂದ ತೆರಳುವ ಖಾಸಗಿ ಬಸ್‌ಗಳು ವಿಪರೀತ ದರ ಏರಿಸಿರುವ ಹಿನ್ನೆಲೆಯಲ್ಲಿ ಬೇರೆ ಊರಿನಲ್ಲಿರುವ ಮತದಾರರು ಮತ ಚಲಾಯಿಸಲು ಅನುವಾಗುವಂತೆ ಸಾರಿಗೆ ವ್ಯವಸ್ಥೆ ಕುರಿತು ಗಮನ ಹರಿಸುವಂತೆ ಚುನಾವಣ ಆಯೋಗ ಕೆಎಎಸ್‌ಆರ್‌ಟಿಸಿ ಮತ್ತು ರೈಲ್ವೇ ಇಲಾಖೆಗೆ ಸೂಚನೆ ನೀಡಿತ್ತು.