ಮಂಡ್ಯ/ಕೋಲಾರ/ಚಿತ್ರದುರ್ಗ: ಕಾಂಗ್ರೆಸ್ ಅಧ್ಯಕ್ಷ, ಸ್ಟಾರ್ ಪ್ರಚಾರಕ ರಾಹುಲ್ ಗಾಂಧಿ ಕೋಲಾರ, ಚಿತ್ರದುರ್ಗ ಮತ್ತು ಮಂಡ್ಯ ಜಿಲ್ಲೆಯಲ್ಲಿ ನಿನ್ನೆ ಪ್ರಚಾರ ನಡೆಸಿದರು.ಕೋಲಾರದಲ್ಲಿ ಈಗಾಗಲೇ ಏಳು ಬಾರಿ ಸಂಸದರಾಗಿರುವ ಕೆ ಎಚ್ ಮುನಿಯಪ್ಪ ಪರ ಪ್ರಚಾರ ಮಾಡಿದರೆ, ಚಿತ್ರದುರ್ಗದಲ್ಲಿ ಕಾಂಗ್ರೆಸ್ -ಜೆಡಿಎಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರ ನಡೆಸಿ ಮತ್ತೊಮ್ಮೆ ಅವರನ್ನು ಆಯ್ಕೆ ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡರು.
ಚಿತ್ರದುರ್ಗದಲ್ಲಿ ರಾಹುಲ್ ಗಾಂಧಿ ತಮ್ಮ ಮಾತನ್ನು ಅರ್ಧಕ್ಕೆ ನಿಲ್ಲಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕುಳಿತಿದ್ದ ಜಾಗಕ್ಕೆ ಹೋಗಿ ಅವರನ್ನು ಆತ್ಮೀಯವಾಗಿ ಆಲಂಗಿಸಿಕೊಂಡು ತಾವು ಒಗ್ಗಟ್ಟಿನಿಂದಿದ್ದೇವೆ ಎಂದು ಜನರ ಮುಂದೆ ಪ್ರದರ್ಶನ ಮಾಡಿದರು.