ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಮಂಗಳೂರು ಕಾರ್ಯಕ್ರಮಕ್ಕೆ ಸಾಗರೋಪಾದಿಯಲ್ಲಿ ಜನರು ಸೇರಿದ್ದರು. ಇದಕ್ಕೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಪಕ್ಷ ತರಾತುರಿಯಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಖಾಲಿ ಕುರ್ಚಿಗಳನ್ನು ರಾರಾಚಿಸುತ್ತಿದ್ದು ಕಾರ್ಯಕ್ರಮಕ್ಕೆ ಬರಬೇಕಾಗಿದ್ದ ಶತ್ರುಘ್ನ ಸಿನ್ಹಾ ಬರದೇ ವಾಪಸ್ ಹಿಂತಿರುಗಿದ್ದಾರೆ.
ಮಂಗಳೂರಿನ ಕದ್ರಿ ಮೈದಾನದಲ್ಲಿ ಶನಿವಾರ ಕಾಂಗ್ರೆಸ್ ಸಮಾವೇಶ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಕಾರ್ಯಕರ್ತರಿಲ್ಲದೇ ಸಮಾವೇಶ ಬಿಕೋ ಎನ್ನುತ್ತಿತ್ತು. ಕದ್ರಿ ಮೈದಾನದ ಸಭೆಯಲ್ಲಿ ಶತ್ರುಘ್ನ ಸಿನ್ಹಾ ಮಾತನಾಡಿ ನಂತರ ಮುಡಿಪುವಿಗೆ ತೆರಳಬೇಕಿತ್ತು.
ಆದರೆ ಕದ್ರಿ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ಸಂಖ್ಯೆ ವಿರಳ ಇದ್ದಿದ್ದನ್ನು ಮನಗಂಡು ಸಚಿವ ಯುಟಿ ಖಾದರ್ ಅವರು ವಿಮಾನ ನಿಲ್ದಾಣದಿಂದ ನೇರವಾಗಿ ಮುಡಿಪುವಿಗೆ ಶತ್ರುಘ್ನ ಸಿನ್ಹಾ ಅವರನ್ನು ಕರೆದೊಯ್ದಿದ್ದರು. ಅಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics