ಮೈಸೂರು: ಎಲ್ಲಾ ರಂಗಗಳಲ್ಲೂ ವಿಫಲವಾಗಿರುವ ಬಿಜೆಪಿ ಸರ್ಕಾರ ಈಗ ಸೈನಿಕರ ವಿಷಯವನ್ನು ರಾಜಕೀಯವಾಗಿ ಎಳೆದು ತರುತ್ತಿದೆ. ಮತ ಕೇಳಲು ಪುಲ್ವಾಮಾ ದಾಳಿ ಪ್ರಕರಣವನ್ನು ಮುಂದಿಡುತ್ತಿರುವ ಪ್ರಧಾನಿ ಮೋದಿ ಏನು ಗನ್ ಹಿಡಿದುಕೊಂಡು ಹೋಗಿದ್ದರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಭಕ್ತಿ ಹೆಸರಲ್ಲಿ ಗಾಂಧಿಯನ್ನ ಕೊಂದಿದ್ದೇ ಬಿಜೆಪಿ ಸಾಧನೆ. ಬಿಜೆಪಿ ಅವರು ದೇಶ ಭಕ್ತಿ ಹೆಸರಲ್ಲಿ ಜನರನ್ನ ದಾರಿ ತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಬಿಜೆಪಿ ಪ್ರಾಣಾಳಿಕೆ ಓಲ್ಡ್ ವೈನ್ ಇನ್ ನ್ಯೂ ಬಾಟಲ್ ಇದ್ದಂತೆ. ದೇಶಭಕ್ತಿ ಹೆಸರಲ್ಲಿ ಮಹಾತ್ಮ ಗಾಂಧೀಜಿ ಅವರನ್ನು ಕೊಂದಿದ್ದೇ ಬಿಜೆಪಿ ಸಾಧನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಲೋಕಸಭೆ ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾವುದೇ ಕಾರಣಕ್ಕೂ ಸರ್ಕಾರ ಪತನವಾಗುವುದಿಲ್ಲ. ಮಾಜಿ ಸಿಎಂ ಯಡಿಯೂರಪ್ಪ ತಿಪ್ಪರಲಾಗಾ ಹಾಕಿದರೂ ಮುಖ್ಯಮಂತ್ರಿ ಆಗುವುದಿಲ್ಲ ಎಂದು ತಿರುಗೇಟು ನೀಡಿದರು.
ನೀವು ಚಲಾಯಿಸುವ ಮತ ಸೇನೆಗೆ ನೀಡಿದಂತೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಟಾಂಗ್ ನೀಡಿದ ಸಿದ್ದರಾಮಯ್ಯ ಅವರು, ಕಳೆದ 16 ಸಾರ್ವತ್ರಿಕ ಚುನಾವಣೆಯಲ್ಲಿ ಸೈನ್ಯ ಇರಲಿಲ್ಲವೆ? ಜೈ ಜವಾನ್ ಜೈ ಕಿಸಾನ್ ಎಂದು ಹೇಳಿದವರು ಯಾರು? ದೇಶ ಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯುವ ಅಗತ್ಯವಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics