ಕರ್ನಾಟಕ

ಮದ್ಯ ಪ್ರಿಯರಿಗೆ ನಿರಾಸೆ: ಇಂದಿನಿಂದ ಮೂರು ದಿನ ಮದ್ಯ ಮಾರಾಟ ಇಲ್ಲ

Srinivasamurthy VN
ಬೆಂಗಳೂರು: ಲೋಕಸಭಾ ಚುನಾವಣೆಯ ನಿಮಿತ್ತ ಇದೇ ಏಪ್ರಿಲ್ 18ರಂದು ಕರ್ನಾಟಕದಲ್ಲಿ ಮೊದಲ ಹಂತದಾನ ಮತದಾನವಾಗಲಿದ್ದು, ಮತದಾನದ ನಿಮಿತ್ತ ಇಂದಿನಿಂದ ಮೂರು ದಿನಗಳ ಕಾಲ ಮದ್ಯ ಮಾರಾಟಕ್ಕೆ ಚುನಾವಣಾ ಆಯೋಗ ನಿರ್ಬಂಧ ಹೇರಿದೆ.
ಲೋಕಸಭೆ ಚುನಾವಣೆಯ ಮತದಾನ ನಿಮಿತ್ತ ಬಹಿರಂಗ ಪ್ರಚಾರ ಇಂದು ಸಂಜೆ 5 ಗಂಟೆಗೆ ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆಯಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.
ಮೊದಲ ಹಂತದ ಚುನಾವಣೆಗಾಗಿ ಇಂದಿನಿಂದ ಮೂರು ದಿನಗಳ ಕಾಲ ಸ್ಥಗಿತವಾದರೆ, ದ್ವಿತೀಯ ಹಂತದ ಚುನಾವಣೆಯ ಸಂದರ್ಭದಲ್ಲಿ ದಿನಾಂಕ 23 ರಿಂದ 24ರ ವರೆಗೆ ಬಾರ್ ಬಂದ್ ಮಾಡುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮತದಾನ ಮುಕ್ತಾಯಕ್ಕೆ 48 ತಾಸು ಮುನ್ನ ಅಂದರೆ ಇಂದು ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.
ಸ್ಥಳೀಯ ಮತದಾರರಲ್ಲದ ನಾಯಕರೂ ಇಂದು ಸಂಜೆಯೇ ಕ್ಷೇತ್ರಗಳನ್ನು ಬಿಟ್ಟು ಹೊರಡಬೇಕಾಗುತ್ತದೆ. ಈ ಕಾರಣಕ್ಕೆ ಬಹುತೇಕ ಅಭ್ಯರ್ಥಿಗಳು ರೋಡ್ ಶೋ ನಡೆಸಿ ಪ್ರಚಾರ ನಡೆಸಿ ಮತಯಾಚನೆ ನಡೆಸುತ್ತಾರೆ.
SCROLL FOR NEXT