ಪ್ರಕಾಶ್ ರೈ 
ಕರ್ನಾಟಕ

ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ : ನಕಲಿ ಪೋಸ್ಟ್ ಗಳ ಬಗ್ಗೆ ಪ್ರಕಾಶ್ ರೈ ಕೆಂಡಮಂಡಲ

ಹಿರಿಯ ನಟ ಹಾಗೂ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕಾಂಗ್ರೆಸ್ ವಿರುದ್ದ ರೈ ಕೆಂಡಮಂಡಲರಾಗಿದ್ದಾರೆ.

ಬೆಂಗಳೂರು: ಹಿರಿಯ ನಟ ಹಾಗೂ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕಾಂಗ್ರೆಸ್ ವಿರುದ್ದ  ರೈ ಕೆಂಡಮಂಡಲರಾಗಿದ್ದಾರೆ.
ಚರ್ಚಾ ಕಾರ್ಯಕ್ರಮವೊಂದರಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರನ್ನು ಭೇಟಿಯಾಗಿ, ಅವರಿಗೆ ಕೈ ಕುಲುಕಿದ್ದೆ. ಕಾಂಗ್ರೆಸ್ ಕಾರ್ಯಕರ್ತರು ಇದರ ಪೋಟೋ ತೆಗೆದುಕೊಂಡಿದ್ದರು. ನಂತರ ಅದನ್ನು ವಾಟ್ಸಾಪ್ ಗುಂಪಿನಲ್ಲಿ ಕಳುಹಿಸಿ ಪ್ರಕಾಶ್ ರೈ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಆದ್ದರಿಂದ ಅವರಿಗೆ ಮತ ನೀಡಿ ವ್ಯರ್ಥಮಾಡಬೇಡಿ ಹೇಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ರಿಜ್ವನ್ ಅರ್ಷದ್ ಅವರ ಆಪ್ತ ಸಹಾಯಕ ಮಾಜರ್ ಅಹ್ಮದ್ ಇದನ್ನ ಮಾಡಿದ್ದಾನೆ ಎಂದು ಪ್ರಕಾಶ್ ರೈ ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಆರೋಪಿಸಿದ್ದಾರೆ.
ಪ್ರಕಾಶ್ ರಾಜ್ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ , ಪ್ರಕಾಶ್ ರಾಜ್ ಅವರಿಗೆ ಮತ ನೀಡಿ ವ್ಯರ್ಥ ಮಾಡಿಕೊಳ್ಳಬೇಡಿ ಎಂಬ ಅಡಿಬರಹದಡಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಈ ಪ್ರಕಾಶ್ ರೈ ಹಾಗೂ ರಿಜ್ವಾನ್  ಅರ್ಷದ್ ಪರಸ್ಪರ ಕೈ ಕುಲುಕುತ್ತಿರುವ ಪೋಟೋಗಳು  ವೈರಲ್ ಆಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT