ಕುಮಾರಸ್ವಾಮಿ 
ಕರ್ನಾಟಕ

ಬಾಲಾಕೋಟ್‌ನ ಯಾವುದೋ ಕಾಡಿನಲ್ಲಿ ಬಾಂಬ್ ಹಾಕಿ ಬಂದಿದ್ದಾರೆ? ನಮಗೆ ಗೊತ್ತಿಲ್ವ: ಸಿಎಂ ಕುಮಾರಸ್ವಾಮಿ

ಭಾರತೀಯ ಯೋಧರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇದೀಗ ಭಾರತೀಯ ವಾಯುಸೇನೆಯ ದಾಳಿಯನ್ನೇ ಪ್ರಶ್ನಿಸುವಂತಾ ಮಾತುಗಳನ್ನು ಆಡಿದ್ದಾರೆ.

ಹುಬ್ಬಳ್ಳಿ: ಭಾರತೀಯ ಯೋಧರ ಕುರಿತು ಹೇಳಿಕೆ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಭಾರತೀಯ ವಾಯುಸೇನೆಯ ದಾಳಿಯನ್ನೇ ಪ್ರಶ್ನಿಸುವಂತಾ ಮಾತುಗಳನ್ನು ಆಡಿದ್ದಾರೆ.
2014ರಲ್ಲಿ ಸಂಪೂರ್ಣ ಬಹುಮತ ಮತ್ತು ಬೆಂಬಲದೊಂದಿಗೆ ಬಿಜೆಪಿ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದಿತ್ತು. ಇಂದಿರಾಗಾಂಧಿಯವರ ನಂತರ ಸಂಪೂರ್ಣ ಸ್ವಾತಂತ್ರ್ಯ ಮೋದಿಯವರಿಗೆ ಸಿಕ್ಕಿದ್ದು, ಅವರೇಕೆ ಸದ್ವಿನಿಯೋಗ ಮಾಡಿಕೊಳ್ಳಲಿಲ್ಲ. ಕಳೆದ 5 ವರ್ಷಗಳಲ್ಲಿ ದೇಶದ ಮತ್ತು ಈ ರಾಜ್ಯದ ಜನತೆಗೆ ಏನೇನು ಮಾಡಿದ್ದೇವೆ ಎಂದು ಹೇಳಿಕೊಳ್ಳಲು ಅವರಲ್ಲೇನು ಇಲ್ಲ. ಅದಕ್ಕೆ ನಮ್ಮ ಮೇಲೆ ವೃಥಾ ಆರೋಪ ಮಾಡಿ ಮತದಾರರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದಾರೆ. 
ಹುತಾತ್ಮ ಯೋಧರ ಹೆಸರಿನಲ್ಲಿ, ಸೇನೆಯ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ಪಾಕಿಸ್ತಾನದ ಬಾಲಾಕೋಟ್ ಬಗ್ಗೆ ಇಲ್ಲಿ ಕುಳಿತ ಜನರಿಗೇನು ಗೊತ್ತಿಲ್ಲ. ಅಲ್ಲಿ ಯಾವುದೋ ಕಾಡಿನಲ್ಲಿ ಬಾಂಬ್ ಹಾಕಿ ಬಂದಿದ್ದಾರೆ. ನಮಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ಸೇನೆಯ ದಾಳಿಯನ್ನೇ ಪ್ರಶ್ನಿಸಿದ್ದಾರೆ.
ದೇಶದ ಜನತೆ ಮುಂದೆ ಕೇಂದ್ರ ಸರ್ಕಾರ ಮತ್ತು ಮೋದಿಯವರು ಸಂಪೂರ್ಣ ವಾಸ್ತವ ಸುದ್ದಿಯನ್ನು ನೀಡಲೇ ಇಲ್ಲ. ಮಾಧ್ಯಮದಲ್ಲಿ ಬಂದ ಸುದ್ದಿಯನ್ನು ಕೇಳಿ, ನೋಡಿ ನಾವೆಲ್ಲ ತಿಳಿದುಕೊಂಡಿದ್ದೇವಷ್ಟೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Video

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!