ರಮ್ಯಾ 
ಕರ್ನಾಟಕ

ಹ್ಯಾಟ್ರಿಕ್ ದಾಖಲೆ ಬರೆದ ನಟಿ: ರಮ್ಯಾ ಸಾಧನೆ ಕೊಂಡಾಡಿದ ಶಾಸಕ ಸುರೇಶ್ ಕುಮಾರ್!

ಕಾಂಗ್ರೆಸ್​ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ, ನಟಿ ರಮ್ಯಾ ಅವರು ಹ್ಯಾಟ್ರಿಕ್​ಸಾಧನೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್​ ...

ಬೆಂಗಳೂರು: ಕಾಂಗ್ರೆಸ್​ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ, ನಟಿ ರಮ್ಯಾ ಅವರು ಹ್ಯಾಟ್ರಿಕ್​ಸಾಧನೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್​ ವ್ಯಂಗ್ಯವಾಡಿದ್ದಾರೆ.
ತಮ್ಮ ಟ್ವಿಟರ್​ ಖಾತೆಯ ಮೂಲಕ ನಟಿ ರಮ್ಯಾ ಅವರನ್ನು ಕುಟುಕಿರುವ ಸುರೇಶ್ ಕುಮಾರ್ ಕೊನೆಗೂ ಮತದಾನ ಮಾಡುವುದಕ್ಕೆ ಬರದೆ ನಟಿ ರಮ್ಯಾ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಇವರು ಕಾಂಗ್ರೆಸ್​ನ ಸೋಷಿಯಲ್ ಮೀಡಿಯಾ ಪ್ರಮುಖರು ಎಂದು ಕಾಲೆಳೆದಿದ್ದಾರೆ.
ರಾಜ್ಯದಲ್ಲಿ ಕಳೆದ ಬಾರಿ ನಡೆದ ವಿಧಾನಸಭಾ ಚುನಾವಣೆ ವೇಳೆಯಲ್ಲಿಯೂ ನಟಿ ರಮ್ಯಾ ಮತದಾನ ಮಾಡಲು ಗೈರಾಗಿದ್ದರು. ಮಂಡ್ಯದಲ್ಲಿ ಸಂಸದರಾಗಿದ್ದ ಸಿ.ಎಸ್​.ಪುಟ್ಟರಾಜು ಅವರು ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ತೆರವಾಗಿದ್ದ ಸಂಸದ ಸ್ಥಾನಕ್ಕೆ ನಡೆದ ಲೋಕಸಭೆಯ ಉಪಚುನಾವಣೆಯಲ್ಲಿಯೂ ರಮ್ಯಾ ಕಾಣಲೇ ಇಲ್ಲ. 
ಇದೀಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಮತದಾನ ಮಾಡದೇ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್