ಸಾಂದರ್ಭಿಕ ಚಿತ್ರ 
ಕರ್ನಾಟಕ

ಮಂಡ್ಯ: ನಿಖಿಲ್ ಸೋತರೆ ರಾಜಕೀಯ ನಿವೃತ್ತಿ- ಸಿ.ಎಸ್. ಪುಟ್ಟರಾಜು

ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತರೆ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಹೇಳಿದ್ದಾರೆ.

ಮಂಡ್ಯ:  ತೀವ್ರ ಕುತೂಹಲ ಕೆರಳಿಸಿರುವ  ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತರೆ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಹೇಳಿದ್ದಾರೆ.

ಮಂಡ್ಯದ ಎಂಟು ಕ್ಷೇತ್ರಗಳಲ್ಲೂ ಸುತ್ತಾಡಿದ್ದು, ಎಲ್ಲಾ ಕಡೆ ನಿಖಿಲ್ ಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಎದುರಾಳಿ ಸುಮಲತಾ ಅಂಬರೀಷ್ ವಿರುದ್ಧವಾಗಿ  ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುಮಲತಾ ಸಿನಿಮಾದಲ್ಲಿ  ಹೇಗೆ ನಟನೆ ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಈ ಚುನಾವಣೆಯಲ್ಲಿ ಉತ್ತಮ ನಟನೆ ಮಾಡಿದ್ದಾರೆ. ಅವರ ನಟನೆಗೆ ಮಂಡ್ಯ ಜನರು ಮರಳಾಗುವುದಿಲ್ಲ, ಚೆಲುವರಾಯಸ್ವಾಮಿ ಯಾರ ಪರವಾಗಿ ಕೆಲಸ ಮಾಡಿದ್ದಾರೋ, ಅವರೆಲ್ಲರೂ ಸೋತಿದ್ದಾರೆ. ಅದೇ ರೀತಿ ಸುಮಲತಾ ಕೂಡಾ ಸೋಲಲಿದ್ದಾರೆ ಎಂದು ಭವಿಷ್ಯ ನುಡಿದರು.

ಆದಾಯ ತೆರಿಗೆ ಇಲಾಖೆ ಸಂಸ್ಥೆಯಾಗಿ ಬದಲಾಗಿದೆ. ಐಟಿ ಅಧಿಕಾರಿಗಳು ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಜನರು ನಿಖಿಲ್ ಕುಮಾರಸ್ವಾಮಿ ಅವರಿಗೆ ಮತ ನೀಡಿದ್ದು,ಯಾರೂ ಏನೇ ಹೇಳಿದ್ದರೂ ನಿಖಿಲ್ ಅವರು ಗೆದ್ದೆ ಗೆಲುತ್ತಾರೆ ಒಂದು ವೇಳೆ ಗೆಲ್ಲದಿದ್ದರೆ ರಾಜಕೀಯಕ್ಕೆ ನಿವೃತ್ತಿ ಘೋಷಿಸುವುದಾಗಿ ಸಿ.ಎಸ್. ಪುಟ್ಟರಾಜು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತೀ ಹೆಚ್ಚು!

ಎಂ.ಎಸ್. ಧೋನಿ ಸಿಎಸ್ ಕೆ ಯಲ್ಲಿ ಶೇ. 25 ರಷ್ಟು ಪಾಲು ಕೇಳಿದ್ದಾರೆಯೇ? 3,820 ಕೋಟಿ ರೂ ಕ್ಲೈಮ್ ಹಿಂದಿರುವ ಸತ್ಯವೇನು?

ವಿದ್ಯಾರ್ಥಿಗಳ ವಿರೋಧದ ಬೆನ್ನಲ್ಲೇ NLSIU ಘಟಿಕೋತ್ಸವ ರದ್ದು; ‘ಅನಿವಾರ್ಯ ಕಾರಣ’ ಎಂದ ವಿವಿ

Yash’s Toxic: ನೆಗೆಟಿವ್ ರಿವ್ಯೂ ನಡುವೆ 'ರೇಟಿಂಗ್' ತೆಗೆದುಹಾಕಿದ ಬುಕ್ ಮೈ ಶೋ; ನಿರೀಕ್ಷಿತ ಕಲೆಕ್ಷನ್ ಇಲ್ವಾ? ನೆಟ್ಟಿಗರಿಂದ ತರಾಟೆ!