ಬೆಂಗಳೂರು: ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ.
ಶಿವಮೊಗ್ಗ, ಬಳ್ಳಾರಿ, ದಾವಣಗೆರೆ, ಕೊಪ್ಪಳ, ಕಲಬುರಗಿ. ರಾಯಚೂರು, ಬೀದರ್, ಧಾರವಾಡ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತಯಂತ್ರ ದೋಷದಿಂದಾಗಿ ವಿಳಂಬವಾಗಿ ಮತದಾನ ಪ್ರಾರಂಭವಾಗಿದೆ.
ಮತದಾರರು ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುತ್ತಿರುವ ದೃಶ್ಯ ಕಂಡುಬರುತ್ತಿದೆ. ಶಿವಮೊಗ್ಗದ ಶಿಕಾರಿಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಅಭ್ಯರ್ಥಿ ಬಿ. ವೈ. ರಾಘವೇಂದ್ರ ತಮ್ಮ ಹಕ್ಕು ಚಲಾಯಿಸಿದರು.ವಿಜಯಪುರದಲ್ಲಿ ರಮೇಶ್ ಜಿಗಜಿಣಗಿ ಮತಗಟ್ಟೆಗೆ ಬಂದು ಮತದಾನ ಮಾಡಿದರು.
ಧಾರವಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣೀ ಮತ ಚಲಾಯಿಸಿದ್ದರೆ, ದಾವಣೆಗೆರೆ ಕೈ ಅಭ್ಯರ್ಥಿ ಹೆಚ್ ಬಿ.ಮಂಜಪ್ಪ ದಂಪತಿ ಹೊನ್ನಾಳ್ಳಿ ಪಟ್ಟಣದ 101 ಮತಗಟ್ಟೆಯಲ್ಲಿ ಮತದಾನ ಮಾಡಿದರು.ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ್ ಹಾಗೂ ಮಾಜಿ ಸಚಿವೆ ಉಮಾಶ್ರೀ ಮತ ಚಲಾಯಿಸಿದರು.