ಕರ್ನಾಟಕ

ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಪ್ರಗತಿಯಲ್ಲಿ, ಜಿದ್ದಾಜಿದ್ದಿಯಲ್ಲಿ ಪ್ರಮುಖರು

Sumana Upadhyaya
ಬೆಂಗಳೂರು: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.
ಚಿಕ್ಕೋಡಿ, ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ್‌, ವಿಜಾಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಹಾವೇರಿ ಮತ್ತು ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನ ಪ್ರಗತಿಯಲ್ಲಿದೆ. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.
ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಹಾಲಿ ಸಂಸದ ಬಿ ವೈ ರಾಘವೇಂದ್ರ ಶಿಕಾರಿಪುರ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು.
ಇಂದಿನ ಸ್ಪರ್ಧೆಯಲ್ಲಿ ಪ್ರಮುಖವಾಗಿ ಮಲ್ಲಿಕಾರ್ಜುನ ಖರ್ಗೆ, ಅನಂತ ಕುಮಾರ್‌ ಹೆಗಡೆ, ರಮೇಶ್‌ ಜಿಗಜಿಣಗಿ, ಜಿ.ಎಂ. ಸಿದ್ದೇಶ್ವರ್‌, ಮಧು ಬಂಗಾರಪ್ಪ, ಬಿ.ವೈ. ರಾಘವೇಂದ್ರ, ವಿ.ಎಸ್‌.ಉಗ್ರಪ್ಪ , ಈಶ್ವರ್‌ ಖಂಡ್ರೆ, ಪ್ರಹ್ಲಾದ್‌ ಜೋಶಿ, ವಿನಯ ಕುಲಕರ್ಣಿ, ಸುರೇಶ್‌ ಅಂಗಡಿ, ಪ್ರಕಾಶ್‌ ಹುಕ್ಕೇರಿ, ಭಗವಂತ್‌ ರಾವ್‌ ಖೂಬಾ, ಗದ್ದಿ ಗೌಡರ್‌, ಕರಡಿ ಸಂಗಣ್ಣ ಸೇರಿ 237 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣೆಯ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
SCROLL FOR NEXT