ಹೆಚ್‍ಡಿ ಕುಮಾರಸ್ವಾಮಿ 
ಕರ್ನಾಟಕ

ಆಪರೇಷನ್ ಕಮಲದ ಭೀತಿ: ಜೆಡಿಎಸ್ ಶಾಸಕಾಂಗ ಸಭೆ ಕರೆದ ಸಿಎಂ ಹೆಚ್‍ಡಿ ಕುಮಾರಸ್ವಾಮಿ

ಲೋಕಸಭಾ ಚುನಾವಣಾ ಬಳಿಕ ಮತ್ತೆ ಆರಂಭವಾಗಿರುವ ಆಪರೇಷನ್ ಕಮಲದ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತಂಕಗೊಂಡಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣಾ ಬಳಿಕ ಮತ್ತೆ ಆರಂಭವಾಗಿರುವ ಆಪರೇಷನ್ ಕಮಲದ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತಂಕಗೊಂಡಿದ್ದಾರೆ. ಹೀಗಾಗಿ ತಮ್ಮ ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಶಾಸಕಾಂಗ ಸಭೆ ಕರೆದಿದ್ದಾರೆ.
ಮಾಜಿ ಸಚಿವ ರಮೇಶ್  ಜಾರಕಿಹೊಳಿ ರಾಜೀನಾಮೆ ಬೆದರಿಕೆ ಬೆನ್ನಲ್ಲೇ ಕುಮಾರಸ್ವಾಮಿ ಆಪರೇಷನ್ ಕಮಲಕ್ಕೆ ತಡೆಯೊಡ್ಡಲು ತಂತ್ರಗಾರಿಕೆ ಮುಂದಾಗಿದ್ದಾರೆ. ಅಲ್ಲದೆ ಪಕ್ಷದ ಶಾಸಕರು ಬಿಜೆಪಿಗೆ ಹೋಗದಂತೆ ಅವರನ್ನು ಹಿಡಿದಿಟ್ಟುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ಶಾಕರಿಗೆ ಔತಣಕೂಟದ ಜೊತೆಗೆ ಶಾಸಕಾಂಗ ಸಭೆ ಆಯೋಜಿಸಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ ನಡೆಯುವ ಮೊದಲ  ಜೆಡಿಎಸ್ ಶಾಸಕಾಂಗ ಸಭೆ ಇದಾಗಿದ್ದು, ಸಭೆಯಲ್ಲಿ ಆಪರೇಷನ್ ಕಮಲದ ಬಗ್ಗೆ, ಲೋಕಸಭೆ  ಕ್ಷೇತ್ರಗಳ ಚುನಾವಣಾ ಫಲಿತಾಂಶ, ಬರ ಸ್ಥಿತಿಗತಿ ಮತ್ತು ಶಾಸಕರ ಕ್ಷೇತ್ರವಾರು ಸಮಸ್ಯೆ ಕುರಿತು ಸಭೆಯಲ್ಲಿ  ವಿಸ್ತೃತ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ  ಅವರ ಜೊತೆ ಮೈತ್ರಿ ಪಕ್ಷದ ಶಾಸಕರು ಯಾರೆಲ್ಲಾ ಸಂಕರ್ಪದಲ್ಲಿದ್ದಾರೆ. ಅವರನ್ನು ಮನವೊಲಿಸಿ ಪಕ್ಷದಲ್ಲಿ ಉಳಿಸಿಕೊಳ್ಳುವುದು, ಯಾವುದೇ ಆಮಿಷಕ್ಕೆ ಪಕ್ಷದ ಶಾಸಕರು ಬಲಿಯಾಗದಂತೆ ತಡೆಯುವ ತಂತ್ರಗಾರಿಕೆ ಇದೆ ಎನ್ನಲಾಗಿದೆ.
ಬಿಜೆಪಿ ಆಪರೇಷನ್ ಕಮಲ ತೀವ್ರಗೊಳಿಸಿದರೆ ಪ್ರತಿಯಾಗಿ ಆಪರೇಷನ್ ಜೆಡಿಎಸ್ ನಡೆಸುವ ಬಗ್ಗೆಯೂ ಚರ್ಚಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT