ಕರ್ನಾಟಕ

ಉಪಚುನಾವಣೆ ಹಿನ್ನೆಲೆ: ಕಾಂಗ್ರೆಸ್ ನಾಯಕರಿಂದ ವೇಣುಗೋಪಾಲ್ ಭೇಟಿ, ಸಿದ್ದರಾಮಯ್ಯ ಗೈರು

Raghavendra Adiga
ಬೆಂಗಳೂರು: ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆಯಾದ ಬಳಿಕ ಮುಖ್ಯಮಂತ್ರಿ  ಎಚ್.ಡಿ.ಕುಮಾರಸ್ವಾಮಿ ಭಾನುವಾರ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿ ಮುಂದಿನ ಕಾರ್ಯತಂತ್ರ ಕುರಿತು ಚರ್ಚಿಸಿದ್ದಾರೆ.  ಆದರೆ ಈ ವೇಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅನುಪಸ್ಥಿತಿ ಗಮನ ಸೆಳೆದಿತ್ತು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಈ ಸಭೆಯಲ್ಲಿ ಹಾಜರಿದ್ದು  ಮೇ 19 ರ ಉಪಚುನಾವಣೆಗೆ ಜೆಡಿಎಸ್ ಸಿದ್ದತೆ ಹೇಗಿದೆ ಎಂದು ಚರ್ಚಿಸಿದ್ದಾರೆ. . ಕುಮಾರಸ್ವಾಮಿ ಕೆಲವು ಕಾಂಗ್ರೆಸ್ ಮುಖಂಡರು ನಿಧಿ ಹಂಚಿಕೆ ಬಗೆಗೆ ಅಸಮಾಧಾನಗೊಂಡಿದ್ದಾರೆ ಎಂಬುದರ ಕುರಿತಂತೆ ಮಾತ್ರವಲ್ಲದೆ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಹೆಚ್ಚಿನ ಹೊಂದಾಣಿಕೆ ಸಾಧ್ಯತೆ ಕುರಿತಂತೆ ಚರ್ಚಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಸಂಬಂಧ ಚರ್ಚೆ ನಡೆದಿದೆ, ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ  ಯೋಜನೆಯ ಕುರಿತಂತೆ ಸಹ ಚರ್ಚಿಸಲಾಗಿದೆ. ಎರಡೂ ಸ್ಥಾನಗಳನ್ನು ಗೆಲ್ಲುವುದರಲ್ಲಿ ನಾವು ಭರವಸೆ ಹೊಂದಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ
ಸಿದ್ದರಾಮಯ್ಯ ಅನುಪಸ್ಥಿತಿ ಬಗೆಗೆ ಪ್ರಶ್ನಿಸಲು ಭಾನುವಾರದ ದಿನದ ಈ ಸಭೆ ಅನೌಪಚಾರಿಕವಾಗಿದ್ದು ಅವರ ಉಪಸ್ಥಿತಿಯ ಅಗತ್ಯವಿಲ್ಲ ಎಂದು ಅವರು ಹೇಳಿದರು.
ಕುಂದಗೋಳ ಹಾಗೂ ಚಿಂಚೋಳಿಯಲ್ಲಿ ತಮ್ಮ ಅಭ್ಯರ್ಥಿಗಳಿಗೆ ಕಾಂಗ್ರೆಸ್ ನಾಯಕರು ಬಿ  ಫಾರಂ ಗಳನ್ನು ಭಾನುವಾರ ವಿತರಿಸಿದ್ದಾರೆ.  ಕೆ.ಸಿ. ವೇಣುಗೋಪಾಲ್ಎರಡೂ ಸ್ಥಾನಗಳನ್ನು ಗೆಲ್ಲುವ ಜವಾಬ್ದಾರಿಯನ್ನು ಸ್ಥಳೀಯ ನಾಯಕರು, ಸಚಿವರಿಗೆ ವಹಿಸಿದ್ದಾರೆ. ಅದರಂದೆ ಡಿಕೆ ಶಿವಕುಮಾರ್ ಅವರಿಗೆ ಕುಂದಗೋಳ ಹಾಗೂ ಚಿಂಚೋಳಿಗೆ ಪ್ರಿಯಾಂಕ್ ಖರ್ಗೆ ಅವರನ್ನು ಉಸ್ತುವಾರಿಯನ್ನಾಗಿಸಲಾಗಿದೆ.
ಈ ಉಪಚುನಾವಣೆ ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯ ವಿಚಾರವಾಗಿದೆ. ಆದರೆ ಸಿದ್ದರಾಮಯ್ಯ ಅವರಿಗೆ ಈ ಎರಡೂ ಸ್ಥಾನಗಳಲ್ಲಿ ಯಾವ ದೊಡ್ಡ ಜವಾಬ್ದಾರಿಯನ್ನೂ ನೀಡಲಾಗಿಲ್ಲ, ಹಾಗೆಯೇ ಅವರ ಅನುಪಸ್ಥಿತಿ ಹಲವರ ಹುಬ್ಬೇರುವಂತೆ ಮಾಡಿದೆ.
SCROLL FOR NEXT