ಕರ್ನಾಟಕ

ಬಿಜೆಪಿ ಮೊದಲ ಪಟ್ಟಿಯಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಹೆಸರಿಲ್ಲ: ಅಭ್ಯರ್ಥಿ ಪ್ರಕಟಿಸದ ಹಿಂದಿನ ಹುನ್ನಾರ ಏನು?

Shilpa D
ಬೆಂಗಳೂರು: ಲೋಕಸಭೆ ಚುನಾವಣೆಗಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ, ಆದರೆ 7 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸದೇ ತಡೆ ಹಿಡಿದಿದೆ.ಎರಡು ಹಂತದ ಚುನಾವಣೆ ನಡೆದಿದ್ದು, ಇರುವ ಕೆಲವೇ ಕೆಲವು ದಿನಗಳ ಸಮಯ ಇರುವಾಗ  ಮಂಡ್ಯ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಮತ್ತು ಹಳೇ ಮೈಸೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಸ್ವಿನಿ ಅನಂತ್ ಕುಮಾರ್ ಅವರ ಹೆಸರು ಅಂತಿಮವಾಗಿದ್ದರೂ ಹೆಸರು ಮಾತ್ರ ಪ್ರಕಟಿಸಿಲ್ಲ, ಸ್ವಲ್ಪ  ದಿನ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ.
ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸಲು ತೇಜಸ್ವಿನಿ ಅನಂತ್ ಕುಮಾರ್ ಇಂಗಿತ ವ್ಯಕ್ತ ಪಡಿಸಿದ್ದಾರೆ, ಈ ನಡುವೆ ಶಾಸಕರಾದ ಆರ್. ಅಶೋಕ್ ಮತ್ತು ವಿ ಸೋಮಣ್ಣ  ಜೊತೆಗೂಡಿ ವಿವಿಧ ದೇವಾಲಯದ ಹಾಗೂ ಮಠಗಳಿಗೆ ಭೇಟಿ ನೀಡಿದ್ದಾರೆ. 
ತೇಜಸ್ವಿನಿ ಅನಂತ್ ಕುಮಾರ್ ಅವರ ಸ್ಪರ್ಧೆಗೆ ಪಕ್ಷದ ಹಲವು ಮುಖಂಡರೇ ವಿರೋಧ ವ್ಯಕ್ತ ಪಡಿಸಿದ್ದಾರೆ, ಕೆಲವು ಮುಖಂಡರು ಒಕ್ಕಲಿಗ ನಾಯಕನನ್ನು ಕಣಕ್ಕಿಳಿಸಬೇಕೆಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ, ಈ ನಡುವೆ ಹೈಕಮಾಂಡ್ ಕೂಡ ಹೊಸ ಮುಖ ಪರಿಚಯಿಸಲು ಮನಸ್ಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸುಧಾಮೂರ್ತಿ, ರೋಹಿಣಿ ನಿಲೇಕಣಿ, ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತಿಸುತ್ತಿದೆ ಎನ್ನಲಾಗಿದೆ, ಹೀಗಾಗಿ ಹೈಕಮಾಂಡ್ ಪ್ಲಾನ್ ರೂಪಿಸುತ್ತಿದೆ ಎಂದು ಯಡಿಯೂರಪ್ಪ ಅವರ ಆಪ್ತರೊಬ್ಬರು ಹೇಳಿದ್ದಾರೆ, ಆದರೆ ಮತ್ತೆ ಕೆಲವರ ಪ್ರಕಾರ ಕಾಂಗ್ರೆಸ್ ಮತ್ತು ಜೆಡಿಎಸ್ ಮೊದಲು ಮೈತ್ರಿ ಅಭ್ಯರ್ಥಿ ಘೋಷಿಸಲಿ ನಂತರ ಬಿಜೆಪಿ ತನ್ನ ಅಭ್ಯರ್ಥಿ ಪ್ರಕಟಿಸಲು ಕಾದು ಕುಳಿತಿದೆ ಎಂದು ಹೇಳುತ್ತಿದ್ದಾರೆ.
ಇನ್ನೂ ಮಂಡ್ಯ ಕ್ಷೇತ್ರಕ್ಕೆ ಅಭ್ಯರ್ಥಿ ಕಣಕ್ಕಿಳಿಸುವುದೋ ಬೇಡವೋ ಎಂಬ ಬಗ್ಗೆ ಇನ್ನೂ ಗೊಂದಲದಲ್ಲೇ ಮುಳುಗಿದೆ, ಸುಮಲತಾ ಬೆನ್ನಿಗೆ ನಿಂತು ಬೆಂಬಲ ನೀಡಲು ಯೋಜಿಸುತ್ತಿದೆ ಎನ್ನಲಾಗಿದೆ, ಆದರೆ ಇದಕ್ಕೆ ಕೆಲವು ಬಿಜೆಪಿ ಮುಖಂಡರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ, ಹೀಗಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ವಿರುದ್ಧ ಕೆಲಸ ಮಾಡಲು ಬಿಜೆಪಿ ಚಿಂತಿಸುತ್ತಿದೆ,
ಮಂಡ್ಯದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸುವುದೋ ಬೇಡವೋ ಎಂಬ ಬಗ್ಗೆ ಇನ್ನೂ ಒಂದು ಎರಡು ದಿನದಲ್ಲಿ ಸ್ಪಷ್ಟವಾಗುತ್ತದೆ ಎಂದು ಬಿಜೆಪಿ ಪದಾಧಿಕಾರಿಯೊಬ್ಬರು ಹೇಳಿದ್ದಾರೆ, ಆದರೆ ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಅಭ್ಯರ್ಥಿಗಳು ಇನ್ನೂ ಫೈನಲ್ ಆಗದ ಕಾರಣ ಹೆಸರು ಪ್ರಕಟಿಸಿಲ್ಲ, ಬೆಂಗಳೂರು ಗ್ರಾಮಾಂತರದಿಂದ ಮಾಜಿ ಶಾಸಕ ಸಿ.ಪಿ ಯೋಗೇಶ್ವರ್ ತಮ್ಮ ಪುತ್ರಿ ನಿಶಾ ಗೆ ಟಿಕೆಟ್ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. 
SCROLL FOR NEXT