ಕರ್ನಾಟಕ

ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಪ್ರಧಾನಿ ಮೋದಿ ಸ್ಪರ್ಧೆ?

Shilpa D
ಬೆಂಗಳೂರು: ಕರ್ನಾಟಕದ ಯಾವುದಾದರೊಂದು ಕ್ಷೇತ್ರದಿಂದ ಸ್ಪರ್ಧಿಸುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಾಜ್ಯ ನಾಯಕರು ದುಂಬಾಲು ಬಿದ್ದಿರುವ ಬೆನ್ನೆಲ್ಲೇ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿನ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಬಿಜೆಪಿ ಗುರುವಾರ ರಾಜ್ಯದ 21 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ, ಅದರಲ್ಲಿ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಪ್ರಕಟಿಸದೇ ಇರುವುದು ನರೇಂದ್ರ ಮೋದಿ ಈ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಊಹಾ ಪೋಹಗಳಿಗೆ ಮತ್ತಷ್ಟು ಪುಷ್ಠಿ ನೀಡುತ್ತಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಎಂದೇ ಗುರುತಿಸಿಕೊಂಡಿದ್ದ ತೇಜಸ್ವಿನಿ ಅನಂತ್ ಕುಮಾರ್ ಹೆಸರು ತಡೆ ಹಿಡಿದಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ,.
2014 ರ ಚುನಾವಣೆಯಲ್ಲಿ ಪ್ರಧಾನಿ ಮೋದಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿ ಗೆದ್ದಿದ್ದರು. ಈ ಬಾರಿಯೂ ಕೂ ವಾರಣಾಸಿಯಿಂದ ಕಣಕ್ಕಿಳಿಯುತ್ತಿರುವ ಮೋದಿ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಥಿಸಲು ಆಸಕ್ತಿ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ, 
ದಕ್ಷಿಣ ಭಾರತದಲ್ಲಿ ಬಿಜೆಪಿ ಪ್ರಾಬಲ್ಯ ಕಡಿಮೆ ಇದೆ ಎಂಬುದನ್ನು ಮನಗಂಡಿರುವ ಕೇಂದ್ರ ನಾಯಕರು ಪಕ್ಷದ ವರ್ಚಸ್ಸನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ ಮೋದಿ ಅವರನ್ನು ಬೆಂಗಳೂರು ದಕ್ಷಿಣದಿಂದ ಸ್ಪರ್ದಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂಬ ವಿಷಯಗಳು ಕೇಳಿ ಬರುತ್ತಿವೆ, ಕರ್ನಾಟಕದಲ್ಲಿ ಹೆಚ್ಚಿನ ಸೀಟುಗಳನ್ನು ಗೆಲ್ಲಲು ಬಿಜೆಪಿಯ ಚುನಾವಣಾ ತಂತ್ರ ಎಂದು ಹೇಳಲಾಗುತ್ತಿದೆ.
ವಾರಣಾಸಿ ಮತ್ತು ಬೆಂಗಳೂರು ಲೋಕಸಭೆ ಕ್ಷೇತ್ರದಿಂದ ಮೋದಿ ಸ್ಪರ್ಧಿಸಿ 2 ಕ್ಷೇತ್ರಗಳಲ್ಲಿ ಗೆದ್ದರೇ ವಾರಣಾಸಿ ಉಳಿಸಿಕೊಂಡು ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ರಾಜಿನಾಮೆ ನೀಡುತ್ತಾರೆ, ಮತ್ತೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯಿಂದ ತೇಜಸ್ವಿನಿ ಅವರನ್ನು ಕಣಕ್ಕಿಲಿಸುವ ಪ್ಲಾನ್ ಬಿಜೆಪಿಯದ್ದಾಗಿದೆ ಎಂದು ಮೂಲಗಳು ತಿಳಿಸಿವೆ..
ಬ್ರಾಹ್ಮಣ ಹಾಗೂ ಒಕ್ಕಲಿಗರ ಪ್ರಾಬಲ್ಯವಿರು ಬೆಂಗಳೂರು ದಕ್ಷಿಣ ಕ್ಷೇತದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಹರಸಾಹಸ ಪಡುತ್ತಿವೆ.
SCROLL FOR NEXT