ಅನಿತಾ ಕುಮಾರಸ್ವಾಮಿ, ಸಿದ್ದರಾಮಯ್ಯ 
ಕರ್ನಾಟಕ

ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಅನಿತಾ ಕುಮಾರಸ್ವಾಮಿ; ಮಗನ ಗೆಲುವಿಗೆ ಸಹಕಾರ ಕೋರಿಕೆ?

ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಕಳೆದ ರಾತ್ರಿ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾಜಿ ...

ಬೆಂಗಳೂರು: ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಕಳೆದ ರಾತ್ರಿ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಭೇಟಿ ನೀಡಿ ಕುತೂಹಲ ಮೂಡಿಸಿದ್ದಾರೆ.
 ಮಂಡ್ಯ ಚುನಾವಣಾ ಅಖಾಡಕ್ಕಿಳಿದಿರುವ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯವನ್ನು ಹೇಗಾದರೂ ಮಾಡಿ ಗೆಲ್ಲಿಸಲು ಹಿಂದುಳಿದ ದಲಿತ ಹಾಗೂ ಅಲ್ಪ ಸಂಖ್ಯಾತ ಮತಗಳನ್ನ ಸೆಳೆಯಲು ಸಿದ್ದರಾಮಯ್ಯ ನೆರವು ಕೋರಲು ಅನಿತಾ ಕುಮಾರಸ್ವಾಮಿ ಸಿದ್ದರಾಮಯ್ಯ ಬಳಿಗೆ ಹೋಗಿದ್ದರು ಎಂದು ಹೇಳಲಾಗುತ್ತಿದೆ.
 ನಿಖಿಲ್ ಕುಮಾರಸ್ವಾಮಿ ನಾಳೆ ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಲಿದ್ದು ಈ ಸಂದರ್ಭದಲ್ಲಿ ಮಂಡ್ಯಕ್ಕೆ ಬರುವಂತೆ ಅನಿತಾ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮಂಡ್ಯದಲ್ಲಿ ಈಗಾಗಲೇ ಹಲವು ಕಾಂಗ್ರೆಸ್ ಮುಖಂಡರು ಸುಮಲತಾಗೆ ಬೆಂಬಲ ನೀಡುವುದಾಗಿ ಹೇಳುತ್ತಿದ್ದು ಇದರಿಂದ ತಮ್ಮ ಮಗನ ಗೆಲುವಿಗೆ ಭಾರೀ ಹೊಡೆತ ಬೀಳಬಹುದು ಎಂದು ಅರಿತಿರುವ ಹೆಚ್ ಡಿ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅದನ್ನು ಸರಿಪಡಿಸಲು ಸಿದ್ದರಾಮಯ್ಯನವರ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ. ಮೈತ್ರಿ ಧರ್ಮ ಪರಿಪಾಲನೆ ನಿಟ್ಟಿನಲ್ಲಿ ತಾವು ಸಹಕಾರ ನೀಡಬೇಕಾದ ಅನಿವಾರ್ಯತೆ ಇದೀಗ ಸಿದ್ದರಾಮಯ್ಯನವರಿಗೆ ಸಹ ಎದುರಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್