ಬಿ.ಕೆ ಹರಿಪ್ರಸಾದ್ 
ಕರ್ನಾಟಕ

20 ವರ್ಷಗಳ ನಂತರ ಬೆಂಗಳೂರು ದಕ್ಷಿಣದಿಂದ ಬಿ.ಕೆ. ಹರಿಪ್ರಸಾದ್ ಸ್ಪರ್ಧೆ: ಬಿಜೆಪಿ ಅಭ್ಯರ್ಥಿ ಗೆಲುವು ಸಲೀಸು!?

ಅಚ್ಚರಿಯ ಬೆಳವಣಿಗೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರನ್ನು ಅಭ್ಯರ್ಥಿಯನ್ನಾಗಿ ಎಐಸಿಸಿ...

ಬೆಂಗಳೂರು: ಅಚ್ಚರಿಯ ಬೆಳವಣಿಗೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್‌ ಅವರನ್ನು ಅಭ್ಯರ್ಥಿಯನ್ನಾಗಿ ಎಐಸಿಸಿ ಘೋಷಿಸಿದೆ. 
ಬೆಂಗಳೂರು ಉತ್ತರ ಅಥವಾ ದಕ್ಷಿಣ ಕನ್ನಡದಿಂದ ಹರಿಪ್ರಸಾದ್ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು, 1991 ರಿಂದಲೂ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಯ ಭದ್ರ ಕೋಟೆಯಾಗಿದೆ, 
1991 ರಲ್ಲಿ ವೆಂಕಟಗಿರಿ ಗೌಡರು ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು, ಅದಾದ ನಂತರ ಎಚ್.ಎನ್ ಅನಂತ್ ಕುಮಾರ್ ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಬೇರೆಯವರಿಗೆ ಬಿಟ್ಟುಕೊಟ್ಟಿರಲಿಲ್ಲ, 1999ರಲ್ಲಿ ಅನಂತ್ ಕುಮಾರ್ ವಿರುದ್ಧ ಸ್ರರ್ಧಿಸಿ ಸೋತಿದ್ದರು. ಬ್ರಾಹ್ಮಣ ಹಾಗೂ ಒಕ್ಕಲಿಗರ ಪ್ರಾಬಲ್ಯವಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಲ್ಲವ ಸಮಾಜದ ಹರಿಪ್ರಸಾದ್ ಕಣಕ್ಕಿಳಿದಿಸಿರುವುದರಿಂದ ಬಿಜೆಪಿ ಗೆಲ್ಲುವ ಅವಕಾಶ ಸಲೀಸಾಯ್ತು. 
ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅನಂತ ಕುಮಾರ್‌ ಕಣಕ್ಕಿಳಿಯಲಿದ್ದಾರೆ ಎಂಬ ನಿರೀಕ್ಷೆ ನಡುವೆ ಬಿಜೆಪಿಯು ಮೊದಲ 2 ಪಟ್ಟಿಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಯನ್ನೇ ಘೋಷಿಸಿಲ್ಲ. ಈ ನಡುವೆ ಪ್ರಧಾನಿ ಮೋದಿಯವರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೂಡ ಕೇಳಿಬರುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್