ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದ್ದೇಗೆ ಎಂದು ನನಗೆ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಿಎಸ್ ಯಡಿಯೂರಪ್ಪ, ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ತೇಜಸ್ವಿನಿ ಅನಂತ್ ಕುಮಾರ್ ಅವರೊಬ್ಬರ ಹೆಸರನ್ನೇ ಶಿಫಾರಸ್ಸು ಮಾಡಿ ಕಳುಹಿಸಿದ್ದೆವು. ಆದರೆ ದೆಹಲಿಯಲ್ಲಿ ಏನಾಯ್ತು ಗೊತ್ತಿಲ್ಲ. ಇದು ಅಚ್ಚರಿಯ ಬೆಳವಣಿಗೆ ಎಂದರು.