ಪ್ರಧಾನಿ ಮೋದಿ, ಸಿದ್ದರಾಮಯ್ಯ
ಬೆಂಗಳೂರು: ಲೋಕಸಭಾ ಚುನಾವಣೆಗೆ ಕೆಲ ದಿನಗಳ ಬಾಕಿ ಇರುವಂತೆಯೇ ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನಲ್ಲಿ ಜೆಡಿಎಸ್ ಬೆಂಬಲಿಗರು ಹಾಗೂ ಕೆಲ ಉದ್ಯಮಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದಕ್ಕೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆಯ ಸಂದರ್ಭದಲ್ಲಿ ಪ್ರತಿಪಕ್ಷಗಳ ನಾಯಕರ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದು ಅವರ ಬೆಂಬಲಿಗರನ್ನು ಬೆದರಿಸುವ ಯತ್ನವಾಗಿದೆ ಎಂದು ಅವರು ಹೇಳಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವ ಹಾಗೂ ನಿರಂಕುಶ ಆಡಳಿತ ನಡುವಿನ ಹೋರಾಟ ಎಂಬುದನ್ನು ಈಗಾಗಲೇ ಹೇಳಿದ್ದು, ಬಿಜೆಪಿ ವಿಶ್ವದಲ್ಲೇ ಅತ್ಯಂತ ಪುಕ್ಕಲು ಪಕ್ಷವಾಗಿದೆ. ಅವರಿಗೆ ನಾಚಿಕೆಯಾಗಬೇಕು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಮೈಸೂರಿನ ವಿಜಯನಗರದಲ್ಲಿರುವ ಪುಟ್ಟರಾಜು ಅಣ್ಣನ ಮಗ ಅಶೋಕ್ ಮನೆ ಮೇಲೆಯೂ ದಾಳಿ ನಡೆದಿದೆ. ನಸುಕಿನ ಜಾವದಿಂದ ಪುಟ್ಟರಾಜು ನಿವಾಸ, ಸಂಬಂಧಿಗಳ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics