ಸುಮಲತಾ ಅವರ ಪತಿ ಮಂಜೇಗೌಡ 
ಕರ್ನಾಟಕ

ನಾನು ದರ್ಶನ್ ಅಭಿಮಾನಿ, 'ಸುಮಲತಾ ಅಂಬರೀಶ್ ವಿರುದ್ಧ ನನ್ನ ಪತ್ನಿ ಸ್ಪರ್ಧಿಸುವುದಿಲ್ಲ': ಮಂಜೇ ಗೌಡ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆ ತೀವ್ರ ಪೈಪೋಟಿ ನೀಡುತ್ತಿರುವ ಸುಮಲತಾ ಅಂಬರೀಶ್ ಅವರಿಗೆ ಸಂಕಟವೊಡ್ಡಿದ್ದ ಮೂವರು ಸುಮಲತಾರ ಪೈಕಿ ಓರ್ವ ಪಕ್ಷೇತರ ಅಭ್ಯರ್ಥಿ ತಮ್ಮ ನಾಮಪತ್ರ ವಾಪಸ್ ಪಡೆಯುವುದಾಗಿ ಘೋಷಣೆ ಮಾಡಿದ್ದಾರೆ.

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆ ತೀವ್ರ ಪೈಪೋಟಿ ನೀಡುತ್ತಿರುವ ಸುಮಲತಾ ಅಂಬರೀಶ್ ಅವರಿಗೆ ಸಂಕಟವೊಡ್ಡಿದ್ದ ಮೂವರು ಸುಮಲತಾರ ಪೈಕಿ ಓರ್ವ ಪಕ್ಷೇತರ ಅಭ್ಯರ್ಥಿ ತಮ್ಮ ನಾಮಪತ್ರ ವಾಪಸ್ ಪಡೆಯುವುದಾಗಿ ಘೋಷಣೆ ಮಾಡಿದ್ದಾರೆ.
ಹೌದು.. ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರ ವಿರುದ್ಧ ಅದೇ ಹೆಸರಿನ ಮೂವರು ಮಹಿಳೆಯರು ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಮತದಾರರಲ್ಲಿ ಗೊಂದಲ ಮೂಡಲು ಕಾರಣರಾಗಿದ್ದರು. ಈ ಪೈಕಿ ಓರ್ವ ಪಕ್ಷೇತರ ಅಭ್ಯರ್ಥಿ ತಮ್ಮ ನಾಮಪತ್ರ ವಾಪಸ್ ಪಡೆಯುವುದಾಗಿ ಹೇಳಿದ್ದಾರೆ.
'ನಾನು ಅಪ್ಪಟ ದರ್ಶನ್ ಅಭಿಮಾನಿ, ಯಾರದೋ ಮಾತು ಕೇಳಿ ನನ್ನ ಪತ್ನಿ ನಾಮಪತ್ರ ಸಲ್ಲಿಸಿದ್ದಾಳೆ.  ನನ್ನ ಪತ್ನಿಯೊಂದಿಗೆ ತೆರಳಿ ನಾಮಪತ್ರ ವಾಪಸ್ಸು ಪಡೆಯುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಗೊರವಿ ಗ್ರಾಮದ ಸುಮಲತಾ ಪತಿ ಮಂಜೇಗೌಡ ಹೇಳಿದ್ದಾರೆ.
ನಗರದಲ್ಲಿ ಈ ಕುರಿತು ಮಾತನಾಡಿದ ಮಂಜೇಗೌಡ, ದರ್ಶನ್ ಅಭಿಮಾನಿಯಾಗಿ ನಾಮಪತ್ರ ವಾಪಸ್ಸು ಪಡೆಯುತ್ತೇನೆ. ಬೂಕನಕೆರೆಯಲ್ಲಿ ಸುಮಲತಾರನ್ನ ಭೇಟಿಯಾಗಿ ನಾಮಪತ್ರ ವಾಪಸ್ಸು ಪಡೆಯುವುದಾಗಿ ಹೇಳಿದ್ದೇನೆ. ನಾನು ದರ್ಶನ್ ಅಭಿಮಾನಿಯಾಗಿರೋ ಕಾರಣ ಸುಮಲತಾಕ್ಕರನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ.
ನಿನ್ನೆಯಷ್ಟೆ ಮೂವರು‌ ಸುಮಲತಾ ಹೆಸರಿನ‌ ಮಹಿಳೆಯರು ನಾಮಪತ್ರ ಸಲ್ಲಿಸಿದ್ದರು. ಅದರಲ್ಲಿ ಕೆ.ಆರ್.ಪೇಟೆ ತಾಲೂಕಿನ ಗೊರವಿ ಗ್ರಾಮದ ಸುಮಲತಾ ಮಂಜೇಗೌಡ ಕೂಡ ಒಬ್ಬರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ