ಸದಾನಂದಗೌಡ 
ಕರ್ನಾಟಕ

ಹೌದು, ನನ್ನದು ನಗು ಮುಖ, ಧನಾತ್ಮಕ ಚಿಂತನೆ: ವೈಯಕ್ತಿಕ ಟೀಕೆಗೆ ಸದಾನಂದ ಗೌಡ ಟಾಂಗ್

ವೈಯಕ್ತಿಕವಾಗಿ ಆರೋಪ ಮಾಡಿದ್ದಕ್ಕೆ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಡಿ.ವಿ.ಸದಾನಂದ ಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಟ್ವಿಟರ್‌ ಮೂಲಕ ಟಾಂಗ್ ನೀಡಿದ್ದಾರೆ.

ಬೆಂಗಳೂರು: ವೈಯಕ್ತಿಕವಾಗಿ ಆರೋಪ ಮಾಡಿದ್ದಕ್ಕೆ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಡಿ.ವಿ.ಸದಾನಂದ ಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಟ್ವಿಟರ್‌ ಮೂಲಕ ಕಾಂಗ್ರೆಸ್ , ಜೆಡಿಎಸ್ ನಾಯಕರಿಗೆ  ಟಾಂಗ್ ನೀಡಿದ್ದಾರೆ.

ಹೌದು ನನ್ನದು ನಗು ಮುಖ, ನನ್ನ ಆಲೋಚನೆಗಳು ಯಾವತ್ತೂ ಧನಾತ್ಮಕ. ಅದಕ್ಕೆ ನಾನು ನಗು ಮುಖದಲ್ಲಿ ಇರುತ್ತೇನೆ. ಗಂಡನನ್ನು ಕಳೆದುಕೊಂಡವರ ಬಗ್ಗೆ ಕೀಳಾಗಿ ಮಾತನಾಡುವ ಋಣಾತ್ಮಕ ಚಿಂತನೆ ನನಗೆ ಯಾವತ್ತೂ ಬಂದಿಲ್ಲ. ಅಧಿಕಾರಕ್ಕೋಸ್ಕರ ಬದುಕಿ ಬಂದ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಂಡು ಹೀನವಾಗಿ ಬದುಕುವ ಜಾಯಮಾನ ನನ್ನದಲ್ಲ ಎಂದು ಟ್ವೀಟ್‌ ಮಾಡಿದ್ದಾರೆ..
 ಬೆಂಗಳೂರು ಉತ್ತರ ಕ್ಷೇತ್ರದ ಸಂಸದನಾಗಿ ನಾನೇನು ಮಾಡಿದ್ದೇನೆ ಎಂದು ನನ್ನ ಜನರಿಗೆ ಗೊತ್ತಿದೆ. ಸಾಂದರ್ಭಿಕ ಮೈತ್ರಿ ಮಾಡಿಕೊಂಡು ಜನರನ್ನು ಏಮಾರಿಸಲು ಹೊರಟ ಹಗಲು ವೇಷಗಾರರಿಗೆ ಮನದಟ್ಟು ಮಾಡುವ ಅಗತ್ಯ ನನಗಿಲ್ಲ  ಎಂದಿದ್ದಾರೆ.
ನಮ್ಮೊಂದಿಗೆ ಮೋದಿಯಂತಹ ಮೋದಿಜಿಯವರಿದ್ದಾರೆ. ಮೋದಿಜಿಯವರ ಜೊತೆಗಿದ್ದರೆ ದೇಶ ಸುರಕ್ಷಿತ ಎನ್ನುವ ಕೋಟಿ ಕೋಟಿ ಜನರಿದ್ದಾರೆ.  ನೀವು ಎದೆಯುಬ್ಬಿಸಿ 2/3 ಹೇಳಿಕೊಳ್ಳುವಂತಹ ನಿಷ್ಕಳಂಕ ಚಾರಿತ್ರ್ಯದ ಒಬ್ಬನೇ ಒಬ್ಬ ನಾಯಕ ನಿಮ್ಮಲ್ಲಿದ್ದಾನೆ ಎನ್ನುವ ಛಾತಿ ನಿಮಗಿದೆಯಾ ? ರಾಜಕೀಯವನ್ನು ರಾಜಕೀಯವಾಗಿ ನಡೆಸಿ, ವೈಯಕ್ತಿಕ ನಿಂದನೆ ನಿಮ್ಮ ತೂಕವನ್ನು ಅಳೆಯುತ್ತದೆ ಎನ್ನುವ ಭಾವನೆ ನಿಮಗಿರಲಿ. ಜನ ಗಮನಿಸುತ್ತಾರೆಂಬ ಕನಿಷ್ಠ ಪ್ರಜ್ಞೆ ಕೂಡ ಇರಲಿ ಎಂದು ಮೈತ್ರಿ ಪಕ್ಷದ ಮುಖಂಡರಿಗೆ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್

ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​​ಗೆ ನೋಟಿಸ್; ಸಿಡಿದೆದ್ದ VHP

"ಸ್ಟಾಲಿನ್ ಸರ್, ಬಾಯಿ ಬಿಡಿ": ವೀರಮಣಿ ಸೆಕ್ಸ್ ಹಗರಣ ಉಲ್ಲೇಖಿಸಿ DMK ವಿರುದ್ಧ CM ವಿಜಯ್ ವಾಗ್ದಾಳಿ

ಮಲಗಿದ್ದಕ್ಕೆ ಕೆಲಸ ಕಳೆದುಕೊಂಡ ಟೆಕ್ಕಿ; ಈಗ 964 ಕೋಟಿ ರೂ ಪರಿಹಾರಕ್ಕೆ ಬೇಡಿಕೆ!

Asian Games 2026: ಭಾರತದ 'ಚಿನ್ನದ' ಬೇಟೆ; ಶೂಟಿಂಗ್ ನಲ್ಲಿ ಸುರುಚಿ ಸಿಂಗ್-ಕಮಲ್ಜೀತ್ ಚಿನ್ನ; ಬೆಳ್ಳಿಗೆ ಮುತ್ತಿಟ್ಟ ಗುಲ್ವೀರ್ ಸಿಂಗ್!