'ಜೆಡಿಎಸ್ ನವರು ಕೌರವ ವಂಶಸ್ಥರು, ಅವರ ಮೇಲೆ ಯುದ್ದ ಮಾಡಬೇಕಾದರೆ ಕೃಷ್ಣನಂತೆ ನಾನು ಇರುತ್ತೇನೆ'
ಯಾವನ್ ಬರ್ತಾನೋ ಬರ್ಲಿ, ನನ್ಮಕ್ಳು ಜೆಡಿಎಸ್ ನವರನ್ನ ಹೆದರಿಸಬೇಕು ಎಂದು ಮಾಜಿ ಶಾಸಕ ಸುರೇಶ್ ಗೌಡ ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದಾರೆ....
ತುಮಕೂರು: ಯಾವನ್ ಬರ್ತಾನೋ ಬರ್ಲಿ, ನನ್ಮಕ್ಳು ಜೆಡಿಎಸ್ ನವರನ್ನ ಹೆದರಿಸಬೇಕು ಎಂದು ಮಾಜಿ ಶಾಸಕ ಸುರೇಶ್ ಗೌಡ ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದಾರೆ.
ತುಮಕೂರಿನಲ್ಲಿ ನೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಸುರೇಶ್ ಗೌಡ ನಾಲಗೆ ಹರಿಬಿಟ್ಟಿದ್ದಾರೆ. ಒಂದೊಂದು ವೋಟು ಕೂಡ ಮುಖ್ಯ. ಯಾವುದಕ್ಕೂ ಎದೆಗುಂದದೆ ದೊಣ್ಣೆ ಹಿಡಿದು ನಿಂತುಕೊಳ್ಳಿ. ಯಾವನ್ ಬರ್ತಾನೋ ಬರಲಿ, ನನ್ಮಕ್ಳು ಜೆಡಿಎಸ್‍ನವರನ್ನು ಹೆದರಿಸಬೇಕು. ಅವರು ಮೋಸ ಮಾಡ್ತಾರೆ. ಅವರು ಕೌರವ ವಂಶಸ್ಥರು. ಅವರ ಮೇಲೆ ಯುದ್ಧ ಮಾಡಬೇಕಾದರೆ ಕೃಷ್ಣನಂತೆ ನಾನು ಇರುತ್ತೀನಿ. ನಿಂತ್ಕೊಂಡು ಯುದ್ಧ ಮಾಡಿ ಅವರನ್ನು ಸಂಹಾರ ಮಾಡೋಣ. ಅವರ ಟೆಕ್ನಿಕ್ಸ್ ನಂಗೆ ಗೊತ್ತಿದೆ ಎಂದು ಹೇಳಿದ್ದಾರೆ.
ಗೌರಿಶಂಕರ್ ನಮ್ ದುಡ್ಡೇ ಹೊಡೀತಾನೆ. ನಮ್ ದುಡ್ಡೇ ಹಂಚ್ತಾನೆ. ಅವನೇನು ಕೋಟ್ಯದೀಶ್ವರ ಅಲ್ಲ. ಅಪ್ಪ ಪೊಲೀಸ್ ಆಗಿದ್ದವನು. ಅವನೊಬ್ಬ ದೊಡ್ಡ ಕಳ್ಳ. ಗಣಿ ಧಣಿಯ 150 ಕೇಸಲ್ಲಿ ಲೂಟಿ ಹೊಡೆದಿದ್ದಾನೆ. ಇಂತಹ ಕಳ್ಳರನ್ನು ದೇವೇಗೌಡರು ಕರೆದುಕೊಂಡು ಬಂದು ನಾಟಿ ಮಾಡುತ್ತಾರೆ.
ಚೆನ್ನಾಗಿ ಇಸ್ಕೊಳ್ಳಿ. ಚೆನ್ನಾಗಿ ತಿನ್ನಿ. ಎಲ್ಲಾ ಇಸ್ಕೊಂಡು ಬಿಜೆಪಿಗೆ ವೋಟು ಹಾಕಿ. ದುಡ್ಡು ಬಂದರೆ ಚೆನ್ನಾಗ್ ಇಸ್ಕೊಂಡು ತಿನ್ರಲೇ. ಅವನು ಕ್ಯಾನ್ವಸ್ ಗೆ ಬಂದರೆ ಊರಿನ ಒಳಗಡೆ ಬಿಡಬೇಡಿ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.