ಕರ್ನಾಟಕ

ತುಮಕೂರು ಲೋಕಸಭಾ ಕ್ಷೇತ್ರ; ಬಂಡಾಯದ ಡ್ರಾಮಾಕ್ಕೆ ಇಂದು ಕ್ಲೈಮ್ಯಾಕ್ಸ್

Sumana Upadhyaya
ತುಮಕೂರು:ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲು ಶುಕ್ರವಾರ ಕೊನೆಯ ದಿನ. ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಬಂಡಾಯ ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ ಮತ್ತು ಮಧುಗಿರಿಯ ಮಾಜಿ ಶಾಸಕ ಕೆಎನ್ ರಾಜಣ್ಣ ಅವರು ಇಂದು ನಾಮಪತ್ರ ವಾಪಸ್ ಪಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ದೇವೇಗೌಡರು ನಿಂತಿರುವುದರಿಂದ ಇದು ಪ್ರತಿಷ್ಠೆಯ ಕ್ಷೇತ್ರವಾಗಿದೆ. ಕಾಂಗ್ರೆಸ್ ನ ಸಂಸದ ಮುದ್ದಹನುಮೇಗೌಡರು ಸ್ಪರ್ಧೆಯಲ್ಲಿ ಇದ್ದರೆ ತಾವು ಕಣದಿಂದ ಹಿಂದೆ ಸರಿಯುವುದಾಗಿ ರಾಜಣ್ಣ ಹೇಳಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ದೂರವಾಣಿ ಕರೆ ಮಾಡಿ ಮಾತನಾಡಿದ್ದರಿಂದ ಮುದ್ದಹನುಮೇಗೌಡರು ಕೂಡ ಸ್ಪರ್ಧೆಯಿಂದ ಹಿಂದೆ ಸರಿಯಲು ಮನಸ್ಸು ಮಾಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೆ ಒಕ್ಕಲಿಗ ಸಮುದಾಯದಲ್ಲಿ ತಾನು ವಿಲನ್ ನಂತೆ ಕಂಡುಬರಲು ಮುದ್ದಹನುಮೇಗೌಡರಿಗೆ ಸಹ ಇಷ್ಟವಿಲ್ಲ. ಜಿಲ್ಲೆಯ ಒಕ್ಕಲಿಗರು ದೇವೇಗೌಡರನ್ನು ಬೆಂಬಲಿಸುತ್ತಾರೆ.
SCROLL FOR NEXT