ಮಂಡ್ಯ: ಕರ್ನಾಟಕದ ಇತರ ಕ್ಷೇತ್ರಗಳ ಪೈಕಿ ಮಂಡ್ಯದಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ಕಾವು ಜೋರಾಗಿದ್ದು ಈ ಮಧ್ಯೆ ಪಕ್ಷೇತ್ತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೋಸ್ಕರ್ ಬಿಜೆಪಿ-ಕಾಂಗ್ರೆಸ್ ದ್ವೇಷವನ್ನು ಮರೆದು ಒಂದಾಗಿ ಪ್ರಚಾರ ನಡೆಸುತ್ತಿವೆ.
ಸುಮಲತಾ ಅವರನ್ನು ಮಣಿಸಲೇಬೇಕು ಎಂದು ಜೆಡಿಎಸ್ ಇನ್ನಿಲ್ಲದ ಪ್ರಯತ್ನಗಳನ್ನು ನಡೆಸುತ್ತಿದೆ. ಆದರೆ ರೆಬಲ್ ಸ್ಟಾರ್ ಅಂಬರೀಶ್ ಅವರ ಮೇಲಿನ ಅಭಿಮಾನಕೋಸ್ಕರ ಮಂಡ್ಯದಲ್ಲಿ ಕಾಂಗ್ರೆಸ್-ಬಿಜೆಪಿಯ ಕಾರ್ಯಕರ್ತರು ಒಟ್ಟಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.
ರಾಜ್ಯದಲ್ಲಿ ಮೈತ್ರಿ ಸರ್ಕಾರವಿದ್ದರೂ ಮಂಡ್ಯದ ಮೈತ್ರಿ ಅಭ್ಯರ್ಥಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಅವರು ತೀವ್ರ ಸ್ಪರ್ಧೆ ಎದುರಿಸುತ್ತಿದ್ದಾರೆ.
ಇನ್ನು ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸುಮಲತಾ ಅಂಬರೀಶ್ ಅವರಿಗೆ ಕೊನೆಯವರಲ್ಲಿ 3ನೇ ಯವರಾಗಿದ್ದು, ನಿಖಿಲ್ ಕುಮಾರಸ್ವಾಮಿ ಅವರ ಹೆಸರು ಮೊದಲ ಸ್ಥಾನದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics