ಎಚ್.ಡಿ ದೇವೇಗೌಡ 
ಕರ್ನಾಟಕ

ದೇವೇಗೌಡರನ್ನು ಗೆಲ್ಲಿಸಲು ಪರಮೇಶ್ವರ್ ಪ್ರಯತ್ನವನ್ನೇ ಮಾಡಿಲ್ಲ: ಸುರೇಶ್ ಗೌಡ

ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ದೇವೇಗೌಡರನ್ನು ಗೆಲ್ಲಿಸಲು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಪ್ರಯತ್ನ ಮಾಡಿಯೇ ಇಲ್ಲ ಎಂದು ....

ಬೆಂಗಳೂರು: ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ದೇವೇಗೌಡರನ್ನು ಗೆಲ್ಲಿಸಲು  ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ  ಪ್ರಯತ್ನ ಮಾಡಿಯೇ ಇಲ್ಲ ಎಂದು ಮಾಜಿ ಶಾಸಕ ಸುರೇಶ್ ಗೌಡ ಆರೋಪಿಸಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ತುಮಕೂರಿನಲ್ಲಿ ಕಾಂಗ್ರೆಸ್ ಪಕ್ಷದವರನ್ನೇ ನಿಲ್ಲಿಸುವ ಮನಸ್ಸಿತ್ತು ಆದರೆ ಅನಿವಾರ್ಯವಾಗಿ ದೇವೇಗೌಡರಿಗೆ ಬೆಂಬಲ ಸೂಚಿಸಬೇಕಾಯಿತು. ಹಾಗಾಗಿ ಪರಮೇಶ್ವರ ಕೂಡ ದೇವೇಗೌಡರ ಪರ ಪ್ರಚಾರವನ್ನೇ ಮಾಡಲಿಲ್ಲ ಎಂದು ಆಪಾದಿಸಿದ್ದಾರೆ.
ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ ಕೂಡ ದೇವೇಗೌಡರನ್ನ ಗೆಲ್ಲಿಸುವುದಕ್ಕೆ ಒಂದು ರೂಪಾಯಿ ಕೆಲಸ ಮಾಡಿಲ್ಲ. ಅಲ್ಲದೆ ಉಪಮುಖ್ಯಮಂತ್ರಿ ಪರಮೇಶ್ವರ್ ಕೂಡ ಎಲ್ಲೂ ಸಭೆ ಮಾಡಿ ಗೆಲ್ಲಿಸೋಕೆ ಶ್ರಮಿಸಿಲ್ಲ ಎಂದು ಆಪಾದಿಸಿದ್ದಾರೆ. ಒಂದೊಮ್ಮೆ ತುಮಕೂರಿನಲ್ಲಿ ದೇವೇಗೌಡರು ಸೋತರೆ ಅದಕ್ಕೆ ಕಾಂಗ್ರೆಸ್-ಜೆಡಿಎಸ್ ಕಾರಣವೇ ಹೊರತು ಬಿಜೆಪಿ ಅಲ್ಲ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್