ಸಿದ್ದರಾಮಯ್ಯ ಮತ್ತು ಈಶ್ವರಪ್ಪ 
ಕರ್ನಾಟಕ

ನಿಮ್ಮ ಮೊಮ್ಮಗಳ ಮೇಲೆ ಅತ್ಯಾಚಾರವಾಗಿದ್ರೆ ಏನು ಮಾಡ್ತಿದ್ರಿ? ನಾಲಾಯಕ್ ನಾಯಕರ ಕೀಳುಮಟ್ಟದ ಹೇಳಿಕೆ!

ಮಳೆ ನಿಂತರೂ ಮರದ ಹನಿ ನಿಲ್ಲುವುದಿಲ್ಲ ಎಂಬ ಗಾದೆ ಮಾತಿನಂತೆ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಗಿದಿದ್ದರೂ ಅದರ ಎಫೆಕ್ಟ್ ಮಾತ್ರ ಇನ್ನೂ ...

ಬೆಂಗಳೂರು: ಮಳೆ ನಿಂತರೂ ಮರದ ಹನಿ ನಿಲ್ಲುವುದಿಲ್ಲ ಎಂಬ ಗಾದೆ ಮಾತಿನಂತೆ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಗಿದಿದ್ದರೂ ಅದರ ಎಫೆಕ್ಟ್ ಮಾತ್ರ ಇನ್ನೂ ಮುಗಿದಿಲ್ಲ, ರಾಜಕೀಯ ಪಕ್ಷಗಳ ನಾಯಕರು ಉಪ ಚುನಾವಣೆ ಪ್ರಚಾರದ ವೇಳೆ ತಮ್ಮ ನಾಲಗೆಹರಿಬಿಟ್ಟಿದ್ದಾರೆ.
ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಮತ್ತೊಮ್ಮೆ ನಾಲಿಗೆ ಹರಿಬಿಟ್ಟಿದ್ದಾರೆ. ಪದೇ-ಪದೇ ಸಿದ್ದರಾಮಯ್ಯ ವಿರುದ್ಧ ಗುಡುಗು ಈಶ್ವರಪ್ಪ ಈ ಬಾರಿ ತೀರಾ ಕೀಳುಮಟ್ಟದ ಹೇಳಿಕೆಯನ್ನು ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 
ಕುಂದಗೋಳ ವಿಧಾನಸಭೆ ಉಪ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವಾಗಿತ್ತು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾಗ, ನಾನು ಏನು ಮಾಡಬೇಕು ಎಂದಿದ್ದರು.ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಕೇಳಿ ನನಗೆ ಆಘಾತವಾಗಿತ್ತು ಎಂದು ಈಶ್ವರಪ್ಪ ಹೇಳಿದ್ದಾರೆ.
ಒಂದು ವೇಳೆ ಸಿದ್ದರಾಮಯ್ಯ ಅವರ ಮೊಮ್ಮಗಳ ಮೇಲೆ ಅತ್ಯಾಚಾರ ನಡೆದರೇ ಏನು ಮಾಡುತ್ತಾರೆ ಎಂಬ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆ.ಈಶ್ವರಪ್ಪ ಅವರ ಈ ಹೇಳಿಕೆಗೆ ಬಿಜೆಪಿ ಮುಖಂಡರೇ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
ಇನ್ಮೀ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ವಿನಾಶಕಾಲೇ ವಿಪರೀತ ಬುದ್ದಿ. ತಾಯಿಯಂತೆಯೇ ಉಗ್ರರಿಗೆ ಬಲಿಯಾದ ರಾಜೀವ್‌ ಜಿ ಬಗ್ಗೆ ನೀಚತನದ ಮಾತನಾಡುತ್ತಿರುವ ಮೋದಿಯವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಚಿಕಿತ್ಸೆಗೆ ಬೇಕಾದ ವಿಶ್ರಾಂತಿಯನ್ನು ದೇಶದ ಮತದಾರರು ಈ ಬಾರಿ ನೀಡುತ್ತಾರೆ. ಅವರು ಈ ಕಾಯಿಲೆಯಿಂದ ಶೀಘ್ರ ಗುಣಮುಖರಾಗಲಿ' ಎಂದು ಬರೆದುಕೊಂಡಿದ್ದಾರೆ.
ಸೋಲುವ ಭಯದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೆ.ಎಸ್ ಈಶ್ವರಪ್ಪ ಹತಾಶ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ, ಸೋಲಿನ ಭೀತಿಯಲ್ಲಿರುವ ಮೋದಿಯವರಿಂದ ಈಶ್ವರಪ್ಪನವರವರೆಗೆ ಎಲ್ಲರ ನಾಲಿಗೆಗಳಲ್ಲಿ ಈ ಹತಾಶೆ ಕಾಣಿಸುತ್ತಿದೆ.  ಸಾರ್ವಜನಿಕ ಹಿತದೃಷ್ಟಿಯಿಂದ 'ಮೈ ಚೌಕಿದಾರ್' ಅಲ್ಲ 'ಮೈ ಪಾಗಲ್' ಎಂದು ಬಿಜೆಪಿ ನಾಯಕರೆಲ್ಲ‌ ಘೋಷಿಸಿಕೊಳ್ಳುವುದು ಒಳ್ಳೆಯದು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT