ಹಾಸನ: ಹಾಸನ ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದು ಇನ್ನು ಫಲಿತಾಂಶಕ್ಕೆ ಕೆಲ ದಿನಗಳು ಬಾಕಿ ಇರುವಂತೆ ಅಭಿಮಾನಿಯೊಬ್ಬರು ತಮ್ಮ ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಪ್ರಜ್ವಲ್ ಹೆಸರಿನಲ್ಲಿ ಪಕ್ಕದಲ್ಲಿ ಸಂಸದ ಎಂದು ಮುದ್ರಿಸಿರುವ ಫೋಟೋ ಇದೀಗ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ.
ಜೂನ್ ತಿಂಗಳ 27ರಂದು ಈ ಮದುವೆ ನಡೆಯಲಿದ್ದು ಇದಕ್ಕೂ ಮುನ್ನವೇ ಜೆಡಿಎಸ್ ಅಭಿಮಾನಿಯೊಬ್ಬರು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಸುಖಾಗಮನವನ್ನು ಬಯಸುವವರು ಎಂದು ಅನಿತಾ ಕುಮಾರಸ್ವಾಮಿ, ಭವಾನಿ ರೇವಣ್ಣ ಅವರ ಜೊತೆಗೆ ಪ್ರಜ್ವಲ್ ರೇವಣ್ಣ ಅವರ ಹೆಸರನ್ನು ಮುದ್ರಿಸಿದ್ದು ಅದರ ಪಕ್ಕದಲ್ಲೆ ಲೋಕಸಭಾ ಸಂಸದರು ಎಂದು ನಮೂದಿಸಿದ್ದಾರೆ. ಈ ಫೋಟೋ ಇದೀಗ ವೈರಲ್ ಆಗಿದೆ.
ಈ ಫೋಟೋ ಕುರಿತಂತೆ ಕೆಲವರು ಇದು ಓವರ್ ಕಾನ್ಫಿಡೆನ್ಸ್ ಗೆ ಒಂದು ಅತ್ಯುತ್ತಮ ಉದಾಹರಣೆ. ಕೂಸು ಹುಟ್ಟುವ ಮುನ್ನವೇ ಕುಲಾಯಿ ಹೋಲಿಸಿದರಂತೆ ಎಂದೆಲ್ಲ ಬರೆದುಕೊಂಡಿದ್ದಾರೆ. ಒಟ್ಟಿನಲ್ಲಿ ಚುನಾವಣೆ ಫಲಿತಾಂಶ ಘೋಷಣೆಗೂ ಮುನ್ನವೇ ಪ್ರಜ್ವಲ್ ರೇವಣ್ಣ ಹಾಸನದ ಸಂಸದರಾಗಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos