ಕರ್ನಾಟಕ

ಕುಂದಗೋಳ ವಿಧಾನಸಭೆ ಉಪಚುನಾವಣೆಯಲ್ಲಿ ಸಚಿವ ಶಿವಳ್ಳಿ ಮರಣ ವಿಷಯವೇ ಬಂಡವಾಳ!

Shilpa D
ಹುಬ್ಬಳ್ಳಿ: ಕುಂದಗೋಳ ವಿಧಾನಸಭೆ ಉಪ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದೆ,. ಸೋಮವಾರ ಸಿಎಂ ಎಚ್.ಡಿ ಕುಮಾರಸ್ವಾಮಿ ಸೋಮವಾರ ಪ್ರಚಾರದಲ್ಲಿ ಪಾಲ್ಗೋಳ್ಳಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮೇ 14ರಿಂದ ನಾಲ್ಕು ದಿನಗಳ ಕಾಲ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಹಿರಿಯ ನಾಯಕರಾದ  ಡಿ.ಕೆ ಶಿವಕುಮಾರ್ ಕಳೆದ ಹಲವು ದಿನಗಳಿಂದ ಕುಂದಗೋಳದಲ್ಲೇ ಬೀಡುಬಿಟ್ಟಿದ್ದಾರೆ. ಬಿಜೆಪಿ ವಿರುದ್ಧ ಶಿವಕುಮಾರ್ ವಾಗ್ದಾಳಿ ಮುಂದುವರಿಸಿದ್ದಾರೆ, ಬಿಜೆಪಿ ಶಾಸಕ ಬಿ,ಶ್ರೀರಾಮುಲು ಅವರು ಶಿವಳ್ಳಿ ಸಾವಿನ ಕುರಿತು ನೀಡಿರುವ ಹೇಳಿಕೆಯನ್ನು ಮುಂದಿಟ್ಟುಕೊಂಡು ಬಿಜೆಪಿ ಹಣಿಯಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಕಿರುಕುಳದಿಂದ ಶಿವಳ್ಳಿ ಸಾವನ್ನಪ್ಪಿದರು ಎಂದು ಶ್ರೀರಾಮುಲು ನೀಡಿದ್ದ ಹೇಳಿಕೆಯನ್ನೇ ಅಸ್ತ್ರವನ್ನಾಗಿಸಿಕೊಳ್ಳಲಾಗಿದೆ,  ಸಂಬಂಧ ಚುನಾವಣಾ ಆಯೋಗಕ್ಕೆ ದೂರು ಸಹ ನೀಡಲಾಗಿದೆ. ಎಲ್ಲಾ ಕಾಂಗ್ರೆಸ್ ನಾಯಕರು ಶ್ರೀರಾಮುಲು ವಿರುದ್ಧ ಹರಿಹಾಯ್ದಿದ್ದಾರೆ.
ಬಿಜೆಪಿ ಮುಖಂಡರಾದ ಬಿ.ಎಸ್ ಯಡಿಯೂರಪ್ಪ, ಶ್ರೀರಾಮುಲು, ಕೆ.ಎಸ್ ಈಶ್ವರಪ್ಪ ಮತ್ತು ಶೋಭಾ ಕರಂದ್ಲಾಜೆ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಮತ್ತು ಪ್ರಹ್ಲಾದ್ ಜೋಶಿ ಹಾಗೂ ಯಡಿಯೂರಪ್ಪ ಕೂಡ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ,. ಕುಂದಗೋಳದಲ್ಲಿ 80ಸಾವಿರ ಲಿಂಗಾಯತ ಮತಗಳಿವೆ, ಈ ಮತಗಳನ್ನು ಪಡೆಯಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮತ್ತೊಂದು ವಾರ ಪ್ರಚಾರದಲ್ಲಿ ತೊಡಗಿಕೊಳ್ಳುವುದಾಗಿ ಹೇಳಿದ್ದಾರೆ, ಹಣ ಮತ್ತು ತೋಳ್ಬಲದಿಂದ ಕುಂದಗೋಳ ವಿಧಾನಸಭೆ ಉಪ ಚುನಾವಣೆಯನ್ನು ಗೆಲ್ಲಬಹುದು ಎಂದು ಕಾಂಗ್ರೆಸ್ ಭಾವಿಸಿದೆ ಆಈದರೆ ಅದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
SCROLL FOR NEXT