ತೇಜಸ್ವಿ ಸೂರ್ಯ 
ಕರ್ನಾಟಕ

ಬಿಜೆಪಿ ಒಂದೇ 300 ಸೀಟು ಗೆದ್ದರೆ ಅಚ್ಚರಿಯಿಲ್ಲ: ತೇಜಸ್ವಿ ಸೂರ್ಯ

ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಲು ಇನ್ನು ಎರಡು ದಿನಗಳು ಮಾತ್ರ ಬಾಕಿಯಿದೆ, ಬಿಜೆಪಿ ಒಂದೇ 300 ಕ್ಷೇತ್ರಗಳಲ್ಲಿ ಗೆಲ್ಲುವುದರಲ್ಲಿ ಅಚ್ಚರಿಯಿಲ್ಲ ...

ಬೆಂಗಳೂರು: ಲೋಕಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಲು ಇನ್ನು ಎರಡು ದಿನಗಳು ಮಾತ್ರ ಬಾಕಿಯಿದೆ, ಬಿಜೆಪಿ ಒಂದೇ 300 ಕ್ಷೇತ್ರಗಳಲ್ಲಿ ಗೆಲ್ಲುವುದರಲ್ಲಿ ಅಚ್ಚರಿಯಿಲ್ಲ ಎಂದು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅಭಿಪ್ರಾಯ ಪಟ್ಟಿದ್ದಾರೆ.
ಕೇವಲ ಗೆಲ್ಲುವ ಕ್ಷೇತ್ರಗಳು ಮಾತ್ರವಲ್ಲ, ಬಿಜೆಪಿ ಮತ್ತು ಎನ್ ಡಿಎ ನಡುವೆ ಮತಗಳ ಹಂಚಿಕೆಕೂ ಹೆಚ್ಚಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎನ್ ಡಿ ಎ 272 ಹೆಚ್ಚು ಸೀಟುಗಳನ್ನು ಗೆಲ್ಲಲಿದೆ, ಬಿಜೆಪಿ ಒಂದೇ 300 ಸೀಟು ಗೆದ್ದರು ಯಾವುದೇ ಆಶ್ಚರ್ಯವಿಲ್ಲ ಎಂದು ತೇಜಸ್ವಿ ಹೇಳಿದ್ದಾರೆ.
ವಯಕ್ತಿಕವಾಗಿ ತಾವು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲುವುದಾಗಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಕೆ ಹರಿಪ್ರಸಾದ್ ಸ್ಪರ್ದಿಸಿದ್ದರು. 
ನಾಮಪತ್ರ ಸಲ್ಲಿಸಲು ಒಂದೇ ದಿನ ಕೊನೆಯಿರುವಾಗ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಅವರ ಹೆಸರನ್ನು ಪ್ರಕಟಿಸಲಾಗಿತ್ತು, 28 ವರ್ಷದ ಯುವಕನಿಗೆ ಬಿಜೆಪಿ ಲೋಕಸಭೆ ಟಿಕೆಟ್ ನೀಡಿದ್ದಿದ್ದು ಎಲ್ಲೆಡೆ ಚರ್ಚೆಗೆ ಕಾರಣವಾಗಿತ್ತು,  ಲೋಕಸಭೆ ಟಿಕೆಟ್ ನೀಡದಿದ್ದರೇ ಪಕ್ಷದ ಪದಾಧಿಕಾರಿ ಅಥವಾ ವಕ್ತಾರರನ್ನಾಗಿ ತೇಜಸ್ವಿ ಅವರನ್ನು ನೇಮಿಸಲಾಗುತ್ತಿತ್ತು ಎಂದು ಬಿಜೆಪಿ ರಾಜ್ಯ.ಪ್ರಧಾನ ಕಾರ್ಯದರ್ಶಿ ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

ಬೆಂಗಳೂರು: ದೃಷ್ಟಿಹೀನ ಸ್ನೇಹಿತೆ ಬಳಿ ಇದ್ದ 49.5 ಲಕ್ಷ ರೂ. ನಗದು, ಚಿನ್ನ ಕದ್ದ ಖದೀಮ ದಂಪತಿ ಬಂಧನ!

SCROLL FOR NEXT