ಕರ್ನಾಟಕ

ಇಂದು ಅಪರಾಹ್ನ 3 ಗಂಟೆ ವೇಳೆಗೆ ಫಲಿತಾಂಶ ಹೊರಬೀಳುವ ನಿರೀಕ್ಷೆ

Sumana Upadhyaya
ಬೆಂಗಳೂರು: ರಾಜ್ಯ ಮತ್ತು ರಾಷ್ಟ್ರದ ಹಲವು ನಾಯಕರ ರಾಜಕೀಯ ಭವಿಷ್ಯವನ್ನು ನಿರ್ಧರಿಸುವ ಲೋಕಸಭೆ ಚುನಾವಣೆ 2019ರ ಮತ ಎಣಿಕೆ ಆರಂಭವಾಗಿ ತಾಸು ಕಳೆದಿದ್ದು ಇಂದು ಅಪರಾಹ್ನ 3 ಗಂಟೆಯ ಹೊತ್ತಿಗೆ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆಯಿದೆ.
ಮತಗಟ್ಟೆಗಳಲ್ಲಿ ಚುನಾವಣಾ ಆಯೋಗ ಸಕಲ ವ್ಯವಸ್ಥೆ ಮಾಡಿದ್ದು ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿಪ್ಯಾಟ್ ಗಳ ಭದ್ರತೆಗೆ ಶಸ್ತ್ರಸಜ್ಜಿತ ಪಾರಾ ಮಿಲಿಟರಿ ಪಡೆಯನ್ನು ನಿಯೋಜಿಸಲಾಗಿದೆ. ಅತಿ ಸೂಕ್ಷ್ಮ ಕ್ಷೇತ್ರವಾದ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಸುಮಲತಾ ಅಂಬರೀಷ್ ಮತ್ತು ನಿಖಿಲ್ ಕುಮಾರಸ್ವಾಮಿ ಮಧ್ಯೆ ಯಾರು ಗೆಲ್ಲುತ್ತಾರೆ ಅನ್ನುವುದು ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸಿದೆ.
ಮಂಡ್ಯ ಕ್ಷೇತ್ರ ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿದ್ದರೆ ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ದೇವೇಗೌಡರು ಮತ್ತು ಅವರ ಇಬ್ಬರು ಮೊಮ್ಮಕ್ಕಳು ಗೆದ್ದರೆ ಸಂಸತ್ತಿಗೆ ಏಕಕಾಲದಲ್ಲಿ ಒಟ್ಟಿಗೆ ಪ್ರವೇಶಿಸಿದ ತಾತ-ಮೊಮ್ಮಕ್ಕಳು ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ.
ಹಾಸನ, ಮಂಡ್ಯ ಮತ್ತು ತುಮಕೂರು ಮೂರೂ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುವ ವಿಶ್ವಾಸ ಹೊಂದಿದ್ದರೆ ಬಹುತೇಕ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಮಂಡ್ಯದಲ್ಲಿ ಕೈಕೊಡುವ ಸಾಧ್ಯತೆಯಿದೆ. ಕಲಬುರಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಡಾ ಉಮೇಶ್ ಜಾಧವ್ ನಡುವೆ ತೀವ್ರ ಪೈಪೋಟಿಯಿದೆ.ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಮತ್ತು ಬಿಜೆಪಿಯ ಬಚ್ಚೇಗೌಡ ಮಧ್ಯೆ ಪೈಪೋಟಿ ಏರ್ಪಟ್ಟಿದೆ.
SCROLL FOR NEXT