ಕುಮಾರಸ್ವಾಮಿ-ಡಿಕೆ ಶಿವಕುಮಾರ್-ಯಡಿಯೂರಪ್ಪ 
ಕರ್ನಾಟಕ

ಅಪ್ಪ-ಮಕ್ಕಳು ಕಾಂಗ್ರೆಸ್ ಅಸ್ತಿತ್ವವನ್ನು ಇಲ್ಲವಾಗಿಸುತ್ತಾರೆ: ನಿಜವಾಯ್ತು ಬಿಎಸ್‌ವೈ ಭವಿಷ್ಯ, ವಿಡಿಯೋ ವೈರಲ್!

2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 9 ಕ್ಷೇತ್ರದಲ್ಲಿ ಜಯಗಳಿಸಿದ್ದು 2019ರಲ್ಲಿ ಕೇವಲ 1 ಕ್ಷೇತ್ರ ಗೆಲ್ಲುವಲ್ಲಿ ಮಾತ್ರ ಯಶಸ್ವಿಯಾಗಿದ್ದು, ಈ ಹಿಂದೆಯೇ ಬಿಎಸ್ ಯಡಿಯೂರಪ್ಪ...

ಬೆಂಗಳೂರು: 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 9 ಕ್ಷೇತ್ರದಲ್ಲಿ ಜಯಗಳಿಸಿದ್ದು 2019ರಲ್ಲಿ ಕೇವಲ 1 ಕ್ಷೇತ್ರ ಗೆಲ್ಲುವಲ್ಲಿ ಮಾತ್ರ ಯಶಸ್ವಿಯಾಗಿದ್ದು, ಈ ಹಿಂದೆಯೇ ಬಿಎಸ್ ಯಡಿಯೂರಪ್ಪ ಅವರು ಅಪ್ಪ-ಮಕ್ಕಳು ಸೇರಿಕೊಂಡು ಕಾಂಗ್ರೆಸ್ ಹೆಸರನ್ನು ಇಲ್ಲದಂತೆ ಮಾಡುತ್ತಾರೆ ಎಂದು ಹೇಳಿದ್ದು ಈ ವಿಡಿಯೋ ಸದ್ಯ ವೈರಲ್ ಆಗಿದೆ.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಬಿಎಸ್‌ವೈ ಅವರು, ನಾನು ಈಗ ಏನನ್ನೂ ಹೇಳುವುದಿಲ್ಲ. ನೀವು ಮಾಡಿಕೊಂಡ ಈ ಮೈತ್ರಿ ಬಗ್ೆ ಮುಂದೊಂದು ದಿನ ಪಶ್ಚಾತಾಪ ಪಡುತ್ತೀರಿ. ಅಪ್ಪ-ಮಕ್ಕಳು ಸೇರಿ ಕೆಲವೇ ತಿಂಗಳಲ್ಲಿ ಕಾಂಗ್ರೆಸ್ ಹೆಸರನ್ನು ಇಲ್ಲದಂತೆ ಮಾಡಿ ಹಾಕುತ್ತಾರೆ. ಒಂದು ವೇಳೆ ಹಾಗೆ ಆಗದೆ ಇದ್ದರೆ ನನ್ನನ್ನು ಯಡಿಯೂರಪ್ಪ ಎಂದು ಕರೆಯಬೇಡಿ ಎಂದು ಡಿಕೆ ಶಿವಕುಮಾರ್ ಅವರಿಗೆ ಸವಾಲು ಹಾಕಿದ್ದರು.
ಅಂದು ಬಿಎಸ್ ವೈ ಹೇಳಿದ್ದ ಮಾತು ಇಂದು ನಿಜವಾಗಿದೆ. 2014ರಲ್ಲಿ 9 ಕ್ಷೇತ್ರ ಗೆದ್ದಿದ್ದ ಕಾಂಗ್ರೆಸ್ 2019ರಲ್ಲಿ ಕೇವಲ 1 ಕ್ಷೇತ್ರ ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಅಲ್ಲಿಗೆ ಯಡಿಯೂರಪ್ಪ ಮಾತು ನಿಜವಾಗಿದೆ ಎಂದು ನೆಟಿಗರು ಇಂದು ಹಳೆಯ ವಿಡಿಯೋವನ್ನು ವೈರಲ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!