ಯೋಗಗುರು ವಿರುದ್ಧ ಎಫ್ಐಆರ್
ಯೋಗಗುರು ರಾಮ್ದೇವ್ ವಿರುದ್ಧ ಉತ್ತರಪ್ರದೇಶದ ಫತೇಪುರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಫತೇಪುರ: ನೀತಿ ಸಂಹಿತೆ ಉಲ್ಲಂಘನೆ ಹಾಗೂ ನಿಷೇಧಾಜ್ಞೆ ಉಲ್ಲಂಘನೆಗೆ ಸಂಬಂಧಿಸಿ ಯೋಗಗುರು ರಾಮ್ದೇವ್ ವಿರುದ್ಧ ಉತ್ತರಪ್ರದೇಶದ ಫತೇಪುರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಜಿಲ್ಲಾಡಳಿತದ ಅನುಮತಿ ಕೋರದೆ ಪತ್ರಿಕಾಗೋಷ್ಠಿ ನಡೆಸುವ ಮೂಲಕ ರಾಮ್ದೇವ್ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ವಿವೇಕ್ ಶ್ರೀವಾಸ್ತವ ತಿಳಿಸಿದ್ದಾರೆ.