ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಗಿರಿರಾಜ್‌ಸಿಂಗ್‌ಗೆ ಜಾಮೀನು

ಮೋದಿ ವಿರೋಧಿಗಳು ಪಾಕಿಸ್ತಾನಕ್ಕೆ ಹೋಗಲಿ ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಬಿಜೆಪಿ ನಾಯಕ ಗಿರಿರಾಜ್ ಸಿಂಗ್...

Vishwanath S
Updated On : 26 Apr 2014, 1:45 am

ಪಟನಾ: ಮೋದಿ ವಿರೋಧಿಗಳು ಪಾಕಿಸ್ತಾನಕ್ಕೆ ಹೋಗಲಿ ಎಂದು ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರಿಗೆ ಕೊನೆಗೂ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಪಟನಾದ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಸಿಂಗ್ ಅವರಿಗೆ ಜಾಮೀನು ನೀಡಿದೆ. ಮೋದಿ ಹೇಳಿಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ಪಟನಾ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಗಿರಿರಾಜ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು  ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ವಾರಾಣಸಿ: 44 ಮಂದಿ ಕಣದಲ್ಲಿ
ವಾರಾಣಸಿ: ಉತ್ತರಪ್ರದೇಶದ ಪ್ರತಿಷ್ಠಿತ ವಾರಾಣಸಿ ಕ್ಷೇತ್ರದಲ್ಲಿ ಒಟ್ಟು 44 ಮಂದಿ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ನರೇಂದ್ರ ಮೋದಿ ಗುರುವಾರ ನಾಮಪತ್ರ ಸಲ್ಲಿಸುವ ವೇಳೆ 34 ಮಂದಿ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಒಟ್ಟು 78 ಮಂದಿ ಉಮೇದ್ವಾರಿಕೆ ಸಲ್ಲಿಸಿದ್ದರು. ನರೇಂದ್ರ ಮೋದಿನಾಮಪತ್ರ ಸೇರಿದಂತೆ ಎಲ್ಲ ಅಭ್ಯರ್ಥಿಗಳ ನಾಮಪತ್ರಗಳ ಪರಿಶೀಲನೆ ಶುಕ್ರವಾರ ನಡೆಯಿತು. ಈ ಸಂದರ್ಭದಲ್ಲಿ 34 ಮಂದಿಯ ನಾಮಪತ್ರ ತಿರಸ್ಕೃತವಾಗಿವೆ. ಮೇ 12ರಂದು ಈ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ.

ಮತ ಹೆಚ್ಚಾದ್ರೆ ಬಹುಮಾನ
ವಡೋದರಾ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಸ್ಪರ್ಧಿಸಿರುವ ಗುಜರಾತ್‌ನ ವಡೋದರಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಲು ಹೊಸ ಯೋಜನೆ ರೂಪಿಸಲಾಗಿದೆ. ಬೂತ್ ಮಟ್ಟದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನರು ಬಂದು ಮತಹಾಕುವಂತೆ ಮಾಡಬೇಕು ಎಂದು ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಓ)ಗೆ ಸೂಚಿಸಲಾಗಿದೆ. ಇಂಥ ಗುರಿ ಸಾಧನೆ ಮಾಡಿದರೆ ಆಯಾ ಬೂತ್‌ನ ಅಧಿಕಾರಿಗೆ ಬಹುಮಾನ ನೀಡಲು ವಡೋದರಾ ಜಿಲ್ಲಾಡಳಿತ ನಿರ್ಧರಿಸಿದೆ.

ತೃತೀಯ ರಂಗದ ಮೈತ್ರಿಗೆ ಸಿದ್ಧ
ಮುಂಬೈ:  ನರೇಂದ್ರ ಮೋದಿ ಪ್ರಧಾನಿಯಾಗುವುದನ್ನು ತಡೆಗಟ್ಟಲು ಕಾಂಗ್ರೆಸ್ ತೃತೀಯ ರಂಗಕ್ಕೆ ಬೆಂಬಲ ನೀಡುವ ಸಾಧ್ಯತೆ ಇದೆ. ಹೀಗೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವೀರಾಜ್ ಚೌಹಾಣ್ ತಿಳಿಸಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಸಾಧ್ಯತೆ ಕಡಿಮೆ. ಪ್ರಾದೇಶಿಕ ಪಕ್ಷಗಳೂ ಕೂಡ ಬಿಜೆಪಿ ಜತೆ ಮೈತ್ರಿ ಬಯಸುತ್ತಿಲ್ಲ ಎಂದು ಅವರು ಹೇಳಿದ್ದಾರೆ. ದೇಶದಲ್ಲಿ ಮೋದಿ ಅಲೆ ಇದೆ ಎಂಬ ಅಭಿಪ್ರಾಯದ ಬಗ್ಗೆ ಮಾತನಾಡಿದ ಅವರು 'ಮೋದಿ ಅಲೆಯೇ ಇಲ್ಲ' ಎಂದರು.

ಮುಲಾಯಂಗೆ ಆಯೋಗ ಎಚ್ಚರಿಕೆ
ನವದೆಹಲಿ: ಉತ್ತರಪ್ರದೇಶದಲ್ಲಿ ಶಾಲಾ ಶಿಕ್ಷಕರಿಗೆ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಬೆದರಿಕೆ ಹಾಕಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಅವರಿಕೆ ಎಚ್ಚರಿಕೆ ನೀಡಿದೆ. ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೇ ಮತ ಹಾಕಬೇಕು. ಇಲ್ಲದಿದ್ದರೆ ಪರಿಣಾಮ ನೆಟ್ಟಗಿರದು ಎಂದು ಶಿಕ್ಷಕರಿಗೆ ಧಮಕಿ ಹಾಕಿದ್ದರು ಎಂದು ಆಯೋಗಕ್ಕೆ ದೂರು ಸಲ್ಲಿಕೆಯಾಗಿತ್ತು. ಇನ್ನು ಮುಂದೆ ತಾವು ಈ ರೀತಿ ವರ್ತಿಸುವುದಿಲ್ಲ ಎಂದು ಆಯೋಗಕ್ಕೆ ತಿಳಿಸಿದ ಹಿನ್ನೆಲೆಯಲ್ಲಿ ಸಿಂಗ್ ಅವರಿಗೆ ಎಚ್ಚರಿಕೆ ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement