ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ತೃತೀಯರಂಗಕ್ಕೆ ಯುಪಿಎ ಬೆಂಬಲವಿಲ್ಲ: ರಾಹುಲ್

ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಉದ್ದೇಶದಿಂದ 'ತೃತೀಯರಂಗ'ಕ್ಕೆ ಕಾಂಗ್ರೆಸ್...

Vishwanath S
Updated On : 4 May 2014, 1:52 am

ಅಮೇಠಿ: ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಉದ್ದೇಶದಿಂದ 'ತೃತೀಯರಂಗ'ಕ್ಕೆ ಕಾಂಗ್ರೆಸ್ ಬೆಂಬಲ ನೀಡುವುದಿಲ್ಲ.  ಹೀಗೆಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸ್ಪಷ್ಟಪಡಿಸಿದ್ದಾರೆ. ಈ ಬಾರಿ ಹೀನಾಯ ಸೋಲು ಕಾಣುವ ಭೀತಿಯಲ್ಲಿರುವ ಕಾಂಗ್ರೆಸ್, ಮೋದಿ ಅವರನ್ನು ಅಧಿಕಾರಕ್ಕೇರುವುದನ್ನು ತಪ್ಪಿಸಲು ತೃತೀಯ ರಂಗಕ್ಕೆ ಬೆಂಬಲ ನೀಡುವುದೇ ಎಂಬ ಪ್ರಶ್ನೆಗೆ ರಾಹುಲ್ ಈ ಉತ್ತರ ನೀಡಿದ್ದಾರೆ.  ತೃತೀಯ ರಂಗಕ್ಕೆ ಬೆಂಬಲ ನೀಡುವುದು ರಾಹುಲ್ ಅವರಿಗೆ ಇಷ್ಟವಿಲ್ಲ. ಅದರ ಬದಲು ಅವರು ಪ್ರತಿಪಕ್ಷ ಸ್ಥಾನದಲ್ಲಿ ಕೂರಲು ಇಷ್ಟಪಡುತ್ತಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬಂದಿತ್ತು. ಈಗ ಸ್ವತಃ ರಾಹುಲ್ ಅವರೇ ಈ ಮಾತನ್ನು ಸ್ಪಷ್ಟಪಡಿಸಿದ್ದಾರೆ.  ಶನಿವಾರ ಅಮೇಠಿಯಲ್ಲಿ ಮಾತನಾಡಿದ ರಾಹುಲ್, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೇರುವುದು ಖಚಿತ. ಹಾಗಾಗಿ ತೃತೀಯ ರಂಗಕ್ಕೆ ಬೆಂಬಲ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದಿದ್ದಾರೆ.  ಫಲಿತಾಂಶದ ಬಳಿಕ 1996ರಂತಹ ಸ್ಥಿತಿ ಮರಳುವ ಸಾಧ್ಯತೆಯಿದೆ. ಅಂತಹ ಸಂದರ್ಭದಲ್ಲಿ ಜಾತ್ಯತೀತ ಪಕ್ಷಗಳಿಗೆ ಕಾಂಗ್ರೆಸ್ ಬೆಂಬಲ ನೀಡಬೇಕಾಗಬಹುದು ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಶುಕ್ರವಾರ ಹೇಳಿದ್ದರು. ಈ ಹಿನ್ನೆಲೆಯಲ್ಲಿ ರಾಹುಲ್ ಮಾತುಗಳು ಹೆಚ್ಚಿನ ಮಹತ್ವ ಪಡೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement