ನಾಳೆ ಅಮೇಠಿಯಲ್ಲಿ ಮೋದಿ ರ್ಯಾಲಿ?
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ಅಮೇಠಿಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಸೋಮವಾರ ಪ್ರಚಾರ ನಡೆಸಲಿದ್ದಾರೆ. ಇದಕ್ಕಾಗಿ ಉತ್ತರಪ್ರದೇಶದ ಬಿಜೆಪಿ ಉಸ್ತುವಾರಿ ಅಮಿತ್ಶಾ ಈಗಾಗಲೇ ಸಾಕಷ್ಟು ಸಿದ್ಧತೆ ನಡೆಸಿದ್ದಾರೆ. ಪಕ್ಷದ ಸ್ಥಳೀಯ ಮುಖಂಡರ ಜತೆಗೆ ಮಾತುಕತೆ ನಡೆಸಿದ್ದಾರೆ. ಜತೆಗೆ, ಮೋದಿ ಅವರ ಇತರೆ ರ್ಯಾಲಿಗಳನ್ನೂ ರದ್ದುಪಡಿಸಿದ್ದಾರೆ. ಒಂದು ವೇಳೆ ಮೋದಿ ಅವರೇನಾದರೂ ಅಮೇಠಿಯಲ್ಲಿ ಪ್ರಚಾರ ನಡೆಸಿದರೆ ತಾನೂ ಕೂಡ ತಕ್ಕ ಉತ್ತರ ನೀಡುವುದಾಗಿ ಕಾಂಗ್ರೆಸ್ ಹೇಳಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡರು ವಾರಾಣಸಿಯಲ್ಲಿ ಒಂದು ಸುತ್ತಿನ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಅಮೇಠಿಯಲ್ಲಿ ಮೇ 7ರಂದು ಚುನಾವಣೆ ನಡೆಯಲಿದೆ.