ಈಗ ರಾಜಿನಾಮೆ ಪರ್ವ
ಹೀನಾಯ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ಲ್ಲೀಗ ರಾಜಿನಾಮೆ ಪರ್ವ ಆರಂಭವಾಗಿದೆ. ಅಸ್ಸಾಂನಲ್ಲಿ ಅತ್ಯಧಿಕ ಸ್ಥಾನಗಳನ್ನು ಗೆಲ್ಲಿಸಿಕೊಡುತ್ತೇನೆ. ಇಲ್ಲದಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದಿದ್ದ ತರುಣ್ ಗೊಗೋಯ್ ಈಗ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ. ಇದರ ಬೆನ್ನಲ್ಲೇ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ನ ಇತರೆ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳೂ ರಾಜಿನಾಮೆ ನೀಡುವ ಪ್ರಸ್ತಾಪ ಹೈಕಮಾಂಡ್ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ನ ಕಳಪೆ ಪ್ರದರ್ಶನ ಹಾಗೂ ಪುತ್ರ ನಿಲೇಶ್ ರಾಣೆ ಸೋಲಿನಿಂದ ಬೇಸತ್ತು ಕೈಗಾರಿಕಾ ಸಚಿವ ನಾರಾಯಣ ರಾಣೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಇನ್ನು ಅಮೃತಸರದಲ್ಲಿ ಬಿಜೆಪಿ ಮುಖಂಡ ಅರುಣ್ ಜೇಟ್ಲಿ ಸೋಲಿನ ಹಿನ್ನೆಲೆಯಲ್ಲಿ ಪಂಜಾಬ್ ಸಚಿವ ಅನಿಲ್ ಜೋಶಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.