ದೇಶ

ರಾಷ್ಟ್ರಪತಿಯಿಂದ ಬಿಜೆಪಿ ಬಲವಷ್ಟೇ ಪರಿಗಣನೆ

ಎನ್‌ಡಿಎ ಸರ್ಕಾರ ರಚಿಸುವುದಾಗಿ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ನವದೆಹಲಿ: ಎನ್‌ಡಿಎ ಸರ್ಕಾರ ರಚಿಸುವುದಾಗಿ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆದರೆ ಸರ್ಕಾರ ರಚನೆಗೆ ಆಮಂತ್ರಣ ನೀಡುವಾಗ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಪರಿಗಣಿಸಿರುವುದು ಬಿಜೆಪಿಯ ಸಂಖ್ಯಾಬಲವನ್ನು ಮಾತ್ರ. ಲೋಕಸಭೆಯಲ್ಲಿ ಸರಳ ಬಹುಮತಕ್ಕೆ 272 ಸದಸ್ಯರ ಅಗತ್ಯವಿದ್ದು, ಬಿಜೆಪಿ 282 ಸದಸ್ಯರನ್ನು ಹೊಂದಿದೆ. ಹೀಗಾಗಿ ರಾಷ್ಟ್ರಪತಿಗಳು ಬಿಜೆಪಿ ಸಂಖ್ಯಾಬಲವನ್ನು ಮಾತ್ರ ಪರಿಗಣಿಸಿದ್ದಾರೆ.
ಮಧ್ಯಾಹ್ನ 3.15ಕ್ಕೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿದ್ದ ನರೇಂದ್ರ ಮೋದಿ ಅವರಿಗೆ ಪ್ರಣಬ್ ಸರ್ಕಾರ ರಚನೆಗೆ ಆಹ್ವಾನ ನೀಡುವ ಪತ್ರ ಹಸ್ತಾಂತರಿಸಿದರು. ಅದರಲ್ಲಿ 'ಬಿಜೆಪಿ ಸಂಸದೀಯ ಪಕ್ಷದ ನಾಯಕ' ಎಂದೇ ನಮೂದಿಸಲಾಗಿದೆ.

 ಪ್ರಣಬ್ ಪತ್ರದಲ್ಲೇನಿದೆ?
'ಶ್ರೀ ನರೇಂದ್ರ ಮೋದಿಜಿ, ಹಾರ್ದಿಕ ಅಭಿನಂದನೆಗಳು. ನಿಮ್ಮನ್ನು ಬಿಜೆಪಿ ಸಂಸದೀಯ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಅಧ್ಯಕ್ಷ ರಾಜನಾಥ ಸಿಂಗ್ ಲಿಖಿತವಾಗಿ ತಿಳಿಸಿದ್ದಾರೆ. ಹೀಗಾಗಿ ಭಾರತೀಯ ಸಂವಿಧಾನದ 75ನೇ ವಿಧಿಯ ಉಪವಿಧಿ 1ರ ಪ್ರಕಾರ ನಿಮ್ಮನ್ನು ಭಾರತದ ಪ್ರಧಾನಿಯಾಗಿ ನೇಮಕ ಮಾಡಿದ್ದೇನೆ ಎಂದು ತಿಳಿಸಲು ಹರ್ಷಿಸುತ್ತೇನೆ. ನಿಮ್ಮ ಸಚಿವ ಸಂಪುಟದ ಇತರ ಸದಸ್ಯರ ಯಾದಿಯನ್ನು ನನಗೆ ನೀಡುವಂತೆ ಸಲಹೆ ಮಾಡುತ್ತೇನೆ'.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT