ದೇಶ

ಸಿಎಂ ಸ್ಥಾನಕ್ಕೆ ಇಂದು ಮೋದಿ ಗುಡ್‌ಬೈ

ಹನ್ನೆರಡು ವರ್ಷಗಳ ಕಾಲ ಗುಜರಾತ್‌ನ ಮುಖ್ಯಮಂತ್ರಿಯಾಗಿ ಅಧಿಕಾರ ನಿರ್ವಹಿಸಿದ ನರೇಂದ್ರ..

ಅಹಮದಾಬಾದ್:  ಹನ್ನೆರಡು ವರ್ಷಗಳ ಕಾಲ ಗುಜರಾತ್‌ನ ಮುಖ್ಯಮಂತ್ರಿಯಾಗಿ ಅಧಿಕಾರ ನಿರ್ವಹಿಸಿದ ನರೇಂದ್ರ ಮೋದಿ ಬುಧವಾರ ರಾಜಿನಾಮೆ ನೀಡಲಿದ್ದಾರೆ. ಗುಜರಾತ್ ವಿಧಾನಸಭೆಯಲ್ಲಿ ವಿಶೇಷ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ವಿದಾಯ ಹೇಳಲಾಗುತ್ತದೆ. ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಗುಜರಾತ್ ಸರ್ಕಾರ ಕೈಗೊಂಡಿದೆ. ಗುಜರಾತ್ ವಿಧಾನಸಭೆಯ ಸೆಂಟ್ರಲ್ ಹಾಲ್‌ನಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಎಲ್ಲಾ ಶಾಸಕರು, ವಿವಿಧ ಪಕ್ಷಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆಂದು ಗುಜರಾತ್ ವಿಧಾನಸಭೆ ಸ್ಪೀಕರ್ ವಜು ವಾಲಾ ತಿಳಿಸಿದ್ದಾರೆ. ಮೊರಾರ್ಜಿ ದೇಸಾಯಿ ಪ್ರಧಾನಿಯಾದ ಬಳಿಕ ಗುಜರಾತ್‌ನಿಂದ ಪ್ರಧಾನಿ ಹುದ್ದೆಗೆ ಏರುವ ಎರಡನೇ ವ್ಯಕ್ತಿ ಮೋದಿಯವರಾಗಲಿದ್ದಾರೆ.
 
ಇಂದು ರಾಜಿನಾಮೆ: ಎನ್‌ಡಿಎ ನಾಯಕನಾಗಿ ಆಯ್ಕೆಯಾದ ಬಳಿಕ ನರೇಂದ್ರ ಮೋದಿ ಮಂಗಳ ವಾರ ರಾತ್ರಿಯೇ ಅಹಮದಾಬಾದ್‌ಗೆ ಆಗಮಿಸಿದ್ದರು. ಬುಧವಾರ ಬೆಳಗ್ಗೆ ರಾಜ್ಯಪಾಲ ಡಾ.ಕಮಲಾ ಬೇನಿವಾಲ್‌ರನ್ನು ಭೇಟಿಯಾಗಿ ತ್ಯಾಗಪತ್ರ ಸಲ್ಲಿಸಲಿದ್ದಾರೆ. ನಂತರ ಅವರು ವಿಧಾನಸಭೆಗೆ ತೆರಳಿ ವಿದಾಯ ಕೂಟದಲ್ಲಿ ಭಾಗವಹಿಸಲಿದ್ದಾರೆ.

ಇಂದು ಬಿಜೆಪಿ ಸಭೆ: ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರ ವಹಿಸಿದ ದಿನದಿಂದಲೂ ವಿವಿಧ ಖಾತೆಗಳನ್ನು ನಿರ್ವಹಿಸಿದ ಹಿರಿಯ ಸಚಿವೆ ಆನಂದಿ ಬೆನ್ ಪಟೇಲ್ ಹೊಸ ಮುಖ್ಯಮಂತ್ರಿಯಾಗುವ ಸಾಧ್ಯತೆಗಳಿವೆ. ಬುಧವಾರ ಸಂಜೆ ಗುಜರಾತ್ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಪಟೇಲ್ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಆಯ್ಕೆ ಮಾಡಲಾಗುವುದು. ಪಟೇಲ್ ಅವರು ಮೋದಿಯರ ವಿಶ್ವಾಸಾರ್ಹ ಸಚಿವೆ ಎಂದು ಬಣ್ಣಿಸಲಾಗುತ್ತದೆ. ಶಾಲಾ ಅಧ್ಯಾಪಕಿಯಾಗಿದ್ದ ಆನಂದಿ ಬೆನ್ ಪಟೇಲ್ ಅವರು ರಾಜಕೀಯ ಸೇರುವ ನಿಟ್ಟಿನಲ್ಲಿ ಉದ್ಯೋಗಕ್ಕೆ ರಾಜಿನಾಮೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT