ರಾಜ್ಯ

ರಾಜ್ಯದಲ್ಲಿ ಬಿಜೆಪಿಗೆ 16 ರಿಂದ 18 ಸ್ಥಾನ: ಬಿಎಸ್‌ವೈ ವಿಶ್ವಾಸ

ಮೇ 16ರಂದು ಪ್ರಕಟಗೊಳ್ಳಲಿರುವ ಚುನಾವಣೆಯ ಫಲಿತಾಂಶ ಬಿಜೆಪಿ...

ಕ.ಪ್ರ.ವಾರ್ತೆ, ಅರಸೀಕೆರೆ, ಮೇ 3
ಮೇ 16ರಂದು ಪ್ರಕಟಗೊಳ್ಳಲಿರುವ ಚುನಾವಣೆಯ ಫಲಿತಾಂಶ ಬಿಜೆಪಿ ಪರವಾಗಿ ಬರಲಿದೆ. ರಾಜ್ಯದಲ್ಲಿ 16ರಿಂದ 18 ಸ್ಥಾನಗಳನ್ನು ಪಕ್ಷ ಗಳಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಧಾರ್ಮಿಕ ಸಮಾರಂಭದಲ್ಲಿ ಪಾಲ್ಗೊಳ್ಳಲು ಶನಿವಾರ ಆಗಮಿಸಿದ್ದ ಅವರು ಹಾರನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,  ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ, ತಾವು ಮಂತ್ರಿಯಾಗಬೇಕೆಂಬ ಇಚ್ಚೆಯನ್ನು ಹೊಂದಿಲ್ಲ. ಮಂತ್ರಿಯಾಗುವುದಕ್ಕಿಂತ ಅವರ ನೇತೃತ್ವದಲ್ಲಿನ ಸರ್ಕಾರದಲ್ಲಿ ಸಂಸತ್‌ಸದಸ್ಯನಾಗಿ ಕೆಲಸ ಮಾಡುವುದೇ ಹೆಮ್ಮೆಯ ಸಂಗತಿ ಎಂದು ಭಾವಿಸುವುದಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪತ್ರಕರ್ತರಿಗೆ ಬೆದರಿಕೆ ಹಾಕಿದ ಸಚಿವ ಅಭಯಚಂದ್ರ ಜೈನ್ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಟುವಾಗಿ ಟೀಕಿಸಿದರು. ಪತ್ರಕರ್ತರಿಗೆ ಧಮಕಿ ಹಾಕುವುದು ಪ್ರಜಾತಂತ್ರ ವ್ಯವಸ್ಥೆ ಹಾಗೂ ಪತ್ರಿಕಾ ಸ್ವಾತಂತ್ರ್ಯದ ಕಗ್ಗೊಲೆಯಾಗಿದೆ. ಸಚಿವರ ಇಂತಹ ವರ್ತನೆ ಅಕ್ಷಮ್ಯ. ಸಚಿವ ಜೈನ್ ಕೂಡಲೇ ಮಾಧ್ಯಮ ಮಿತ್ರರ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ ಅವರು ರಾಜಕಾರಣಿಗಳಿಗೆ ಇಂತಹ ಪರಿಸ್ಥಿತಿಗಳು ನಿರ್ಮಾಣವಾಗಿರುವುದು ಸಹಜ. ಆದರೆ ಇಂತಹ ವರ್ತನೆ ಯಾವುದೇ ವ್ಯಕ್ತಿಗೆ ಯಾರಿಗೂ ಶೋಭೆ ತರುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗ ಭ್ರಷ್ಟಾಚಾರ ಕುರಿತು ಅಧ್ಯಾಯ ವಿವಾದ: 8ನೇ ತರಗತಿ ಪಠ್ಯಪುಸ್ತಕವನ್ನು ಹಿಂಪಡೆದು ಸಾರ್ವಜನಿಕ ಕ್ಷಮೆಯಾಚಿಸಿದ NCERT

US-Iran conflict: ತೈಲ ಸಾಗಣೆ ನಿಂತರೆ ಇದೂವರೆಗೆ ನಡೆಸಿದ್ದಕ್ಕಿಂತ 20 ಪಟ್ಟು ಹೆಚ್ಚು ದಾಳಿ: ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

US-Iran war ಎಫೆಕ್ಟ್: ಪಾಕಿಸ್ತಾನದಲ್ಲಿ ಇಂಧನ ಸಂಕಷ್ಟ; ಶಾಲೆಗಳು 2 ವಾರ ಬಂದ್, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Epic Fury: ಇರಾನ್‌ನಲ್ಲಿ ಸೈನಿಕ ಕಾರ್ಯಾಚರಣೆ ಸದ್ಯದಲ್ಲೇ ಅಂತ್ಯಗೊಳ್ಳಲಿದೆ: ಡೊನಾಲ್ಡ್ ಟ್ರಂಪ್

ಆಹಾರ, ಶೂ, ಸಮವಸ್ತ್ರ ಎಲ್ಲಾ ಸೌಲಭ್ಯಗಳಿದ್ದರೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿತ: ಸರ್ಕಾರ ವಿಷಾದ

SCROLL FOR NEXT