ವಿಶ್ವಕಪ್ ಗೆದ್ದ ಫ್ರಾನ್ಸ್ ಆಟಗಾರರ ಸಂಭ್ರಮ 
ಫೀಫಾ ವಿಶ್ವ ಕಪ್ 2018

ಫೀಫಾ ವಿಶ್ವಕಪ್ 2018 ಫೈನಲ್: ಐತಿಹಾಸಿಕ ದಾಖಲೆ ಬರೆದ ಫ್ರಾನ್ಸ್ ಕೋಚ್ ಡೈಡಿಯರ್ ದೆಶ್ಚಾಂಪ್ಸ್‌

ಫೀಫಾ ವಿಶ್ವಕಪ್ 2018ರ ವಿಶ್ವಕಪ್ ಟೂರ್ನಿಯಲ್ಲಿ ಕ್ರೊವೇಷಿಯಾ ಮಣಿಸಿದ ಫ್ರಾನ್ಸ್ ತಂಡ 20 ವರ್ಷಗಳ ಬಳಿಕ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಅಷ್ಟು ಮಾತ್ರವಲ್ಲದೇ ಫ್ರಾನ್ಸ್ ತಂಡದ ಕೋಚ್ ಡೈಡಿಯರ್ ದೆಶ್ಚಾಂಪ್ಸ್‌ ದಾಖಲೆಯೊಂದನ್ನು ಕೂಡ ನಿರ್ಮಾಣ ಮಾಡಿದ್ದಾರೆ.

ಮಾಸ್ಕೋ: ಫೀಫಾ ವಿಶ್ವಕಪ್ 2018ರ ವಿಶ್ವಕಪ್ ಟೂರ್ನಿಯಲ್ಲಿ ಕ್ರೊವೇಷಿಯಾ ಮಣಿಸಿದ ಫ್ರಾನ್ಸ್ ತಂಡ 20 ವರ್ಷಗಳ ಬಳಿಕ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಅಷ್ಟು ಮಾತ್ರವಲ್ಲದೇ ಫ್ರಾನ್ಸ್ ತಂಡದ ಕೋಚ್ ಡೈಡಿಯರ್ ದೆಶ್ಚಾಂಪ್ಸ್‌ ದಾಖಲೆಯೊಂದನ್ನು ಕೂಡ ನಿರ್ಮಾಣ ಮಾಡಿದ್ದಾರೆ.
ಈ ಹಿಂದೆ ವಿಶ್ವಕಪ್ ಗೆದ್ದ ಫ್ರಾನ್ಸ್ ತಂಡದ ನಾಯಕರಾಗಿ ಯಶಸ್ವಿಯಾಗಿ ಮುನ್ನಡೆಸಿದ್ದ ಡೈಡಿಯರ್ ದೆಶ್ಚಾಂಪ್ಸ್‌ ಇದೀಗ ಕೋಚ್ ಆಗಿಯೂ ತಮ್ಮ ತಂಡಕ್ಕೆ ಯಶಸ್ವಿ ತರಬೇತಿ ನೀಡಿ ಮತ್ತೆ ತಮ್ಮ ತಂಡ ವಿಶ್ವಕಪ್ ಗೆಲ್ಲುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.
1998ರಲ್ಲಿ ಫ್ರಾನ್ಸ್ ನಲ್ಲಿ ನಡೆದಿದ್ದ ವಿಶ್ವಕಪ್ ಟೂರ್ನಿಯಲ್ಲಿ ಅಂದು ಫ್ರಾನ್ಸ್ ತಂಡದ ನಾಯಕರಾಗಿದ್ದ ಡೈಡಿಯರ್ ದೆಶ್ಚಾಂಪ್ಸ್‌ ಯಶಸ್ವಿಯಾಗಿ ಮುನ್ನಡೆಸಿದ್ದು ಮಾತ್ರವಲ್ಲದೇ ತಂಡ ವಿಶ್ವಕಪ್ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಇದೀಗ ಬರೊಬ್ಬರಿ 20 ವರ್ಷಗಳ ಬಳಿಕ ಇದೇ ಡೈಡಿಯರ್ ದೆಶ್ಚಾಂಪ್ಸ್‌ ಫ್ರಾನ್ಸ್ ತಂಡದ ಕೋಚ್ ಆಗಿ ತಂಡ ವಿಶ್ವಕಪ್ ಗೆಲ್ಲುವಲ್ಲಿ ಮಹತ್ವಗದ ಪಾತ್ರವಹಿಸಿ ನೂತನ ದಾಖಲೆ ನಿರ್ಮಾಣ ಮಾಡಿದ್ದಾರೆ.
ಒಮ್ಮೆ ಆಟಗಾರನಾಗಿಯೂ ಮತ್ತೊಮ್ಮೆ ಕೋಚ್ ಆಗಿಯೂ ವಿಶ್ವಕಪ್ ಗೆದ್ದ ಅಪರೂಪದ ಸಾಧನೆಗೆ ಡೈಡಿಯರ್ ದೆಶ್ಚಾಂಪ್ಸ್‌ ಒಡೆಯನಾಗಿದ್ದು, ಈ ಹಿಂದೆ ಬ್ರೆಜಿಲ್ ತಂಡದ ಮಾಜಿ ಆಟಗಾರ ಮತ್ತು ಕೋಚ್ ಮರಿಯೊ ಜಗಲೊ ಮತ್ತು ಫ್ರಾನ್ಜ್‌ ಬೆಕೆನ್‌ಬೌರ್‌ ಅವರು ಇಂತಹ ಅಪರೂಪದ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ಫ್ರಾನ್ಸ್ ಕೋಚ್ ಡೈಡಿಯರ್ ದೆಶ್ಚಾಂಪ್ಸ್‌ ನೂತನ ಸೇರ್ಪಡೆಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT