ಟೆರೆಸೊಪೊಲೀಸ್ (ಬ್ರೆಜಿಲ್): ಗಾಯಗೊಂಡು ಸೆಮಿಫೈನಲ್ ಪಂದ್ಯದಿಂದ ಹೊರಬಿದ್ದಿದ್ದ ಬ್ರೆಜಿಲ್ ತಂಡದ ಸ್ಟಾರ್ ಸ್ಟ್ರೈಕರ್ ನೇಮಾರ್, ಶನಿವಾರ ತಡ ರಾತ್ರಿ ಹಾಲೆಂಡ್ ವಿರುದ್ಧ ನಡೆಯಲಿರುವ 3ನೇ ಸ್ಥಾನದ ಪ್ಲೇ ಆಫ್ ಪಂದ್ಯಕ್ಕೆ ಸಿದ್ಧತೆ ನಡೆಸುತ್ತಿರುವ ಬ್ರೆಜಿಲ್ ತಂಡವನ್ನು ಸೇರಿಕೊಳ್ಳಲಿದ್ದಾರೆ.
ನೇಮಾರ ಅನುಪಸ್ಥಿತಿಯ ಹಿನ್ನೆಲೆಯಲ್ಲಿ ಮಂಗಳವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬ್ರೆಜಿಲ್ ತಂಡ ಜರ್ಮನಿ ವಿರುದ್ಧ 7-1 ಗೋಲುಗಳ ಅಂತರದಿಂದ ಸೋಲನುಭವಿಸಿತ್ತು. ಕೊಲಂಬಿಯಾ ವಿರುದ್ಧದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಬೆನ್ನು ಮೂಳೆ ಮುರಿದುಕೊಂಡಿದ್ದ ನೇಮಾರ್ ಸೆಮಿಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದರು.