ಅರಶಿನ ಎಲೆಯ ಪತ್ತೋಳಿ 
ಅಡುಗೆ

ಅರಶಿನ ಎಲೆಯ ಪತ್ತೋಳಿ

ನಾಗರ ಪಂಚಮಿ ಹಬ್ಬಕ್ಕೆ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾಡುವ ವಿಶೇಷ ತಿಂಡಿಯಾಗಿದೆ ಇದೆ. ಈ ತಿಂಡಿಯನ್ನು ಅರಶಿನ ಎಲೆಯ ಕಡುಬು...

ನಾಗರ ಪಂಚಮಿ ಹಬ್ಬಕ್ಕೆ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾಡುವ ವಿಶೇಷ ತಿಂಡಿಯಾಗಿದೆ ಇದು. ಈ ತಿಂಡಿಯನ್ನು ಅರಶಿನ ಎಲೆಯ ಕಡುಬು/ ಅರಶಿನ ಎಲೆಯ ಗೆಣಸಲೆ/ ಪಾನ್ ಪತ್ತೋಳಿ ಎಂದೂ ಹೇಳುತ್ತಾರೆ.

ಬೇಕಾಗುವ ಸಾಮಾಗ್ರಿಗಳು
ಬೆಳ್ತಿಗೆ ಅಕ್ಕಿ -2 ಕಪ್
ತೆಂಗಿನ ಕಾಯಿ (ತುರಿದದ್ದು)- ಒಂದೂವರೆ ಕಪ್
ಬೆಲ್ಲ -ಮುಕ್ಕಾಲು ಕಪ್
ಅರಶಿನ ಎಲೆ (ಎಂಟು)
ಏಲಕ್ಕಿ ಪುಡಿ
ಉಪ್ಪು (ರುಚಿಗೆ ತಕ್ಕಷ್ಟು)



ಮಾಡುವ ವಿಧಾನ

2 ಕಪ್ ಬೆಳ್ತಿಗೆ ಅಕ್ಕಿಯನ್ನು 2-3 ಗಂಟೆಗಳ ಕಾಲ ನೆನೆ ಹಾಕಿ. ನೆನೆ ಹಾಕಿದ ಅಕ್ಕಿಯನ್ನು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ರುಬ್ಬಬೇಕು. ನಯವಾಗಿ ರುಬ್ಬಿದ ಹಿಟ್ಟು ಜಾಸ್ತಿ ಗಟ್ಟಿಯೂ ಅಲ್ಲದೆ ನೀರು ನೀರಾಗಿಯೂ ಇರದೆ ಹದವಾಗಿರಬೇಕು.

ಇನ್ನೊಂದು ಪಾತ್ರೆಯಲ್ಲಿ ಒಂದೂವರೆ ಕಪ್ ತುರಿದ ತೆಂಗಿನ ಕಾಯಿಗೆ ಮುಕ್ಕಾಲು ಕಪ್ ಬೆಲ್ಲ (ಪುಡಿ ಮಾಡಿದ್ದು) ಹಾಕಿ ಬೆರೆಸಿ. ಬೆಲ್ಲ ಮತ್ತು ತೆಂಗಿನ ತುರಿ ಮಿಶ್ರಣಕ್ಕೆ ಏಲಕ್ಕಿ ಪುಡಿಯನ್ನು ಸೇರಿಸಿ.

ಆಮೇಲೆ ತೊಳೆದು ಒರೆಸಿಟ್ಟಿರುವ ಅರಶಿನ ಎಲೆಯಲ್ಲಿ ಅಕ್ಕಿ ಹಿಟ್ಟನ್ನು ಸವರಿ. ಅದರ ಮಧ್ಯೆ ಬೆಲ್ಲ ಹಾಗು ಕಾಯಿತುರಿ ಮಿಶ್ರಣವನ್ನು ಹರಡಿ ಎಲೆಯನ್ನು ಲಂಬವಾಗಿ ಮಡಚಬೇಕು.

ಹೀಗೆ ಮಡಚಿದ ಎಲೆಗಳನ್ನು ಇಡ್ಲಿ ಪಾತ್ರೆಯಲ್ಲಿಟ್ಟು ಹಬೆಯಲ್ಲಿ ಬೇಯಿಸಿ ತಣ್ಣಗಾದ ಮೇಲೆ (ತುಪ್ಪ ಸೇರಿಸಿ) ಸವಿಯಬಹುದು.



Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!