ಅಣಬೆಯನ್ನು ಚೆನ್ನಾಗಿ ತೊಳೆದು ಸಣ್ಣದಾಗಿ ಕತ್ತರಿಸಿಕೊಳ್ಳಬೇಕು.
ಬಾಣಲೆಯೊಂದನ್ನು ಒಲೆಯ ಮೇಲಿಟ್ಟು ಇದಕ್ಕೆ ಸ್ವಲ್ಪ ಎಣ್ಣೆ ಹಾಕಿ ಈರುಳ್ಳಿ, ಶುಂಠಿ-ಬೆಳ್ಳುಳ್ಳು ಪೇಸ್ಟ್,, ಸಣ್ಣಗೆ ಹೆಚ್ಚಿಕೊಂಡ ಹಸಿ ಮೆಣಸಿನಕಾಯಿ, ಜೀರಿಗೆ ಹಾಕಿ ಚೆನ್ನಾಗಿ ಹುರಿದುಕೊಳ್ಳಬೇಕು. ನಂತರ ಇದಕ್ಕೆ ಅಣಬೆಯನ್ನು ಹಾಕಿ ಹುರಿದುಕೊಳ್ಳಬೇಕು. ಇದಕ್ಕೆ ಬೆಣ್ಣೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು.
ಒಂದು ಪಾತ್ರೆಯಲ್ಲಿ ಹಸಿ ಮೆಣಸಿನ ಕಾಯಿ, ಶುಂಠಿ-ಬೆಳ್ಳುಳ್ಳು ಪೇಸ್ಟ್, ಮೊಸರು, ಕೆನೆ, ಉಪ್ಪು, ಸಾಸಿವೆ ಎಣ್ಣೆ, ಪುದೀನಾ ಪೇಸ್ಟ್, ಗರಂ ಮಸಾಲೆ ಮತ್ತು ಕಡಲೆ ಹಿಟ್ಟು ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು.
ಈ ಮಿಶ್ರಣಕ್ಕೆ ಹುರಿದುಕೊಂಡ ಅಣಬೆಗಳನ್ನು ಅದ್ದಿ ಓವೆನ್ ನಲ್ಲಿ 180 ಡಿಗ್ರಿ ಉಷ್ಣತೆಯಲ್ಲಿ 10 ನಿಮಿಷ ಬೇಯಿಸಿದರೆ ಮಶ್ರೂಮ್ ಕಬಾಬ್ ತಯಾರಾಗುತ್ತದೆ.