ಗೋಳಿ ಬಜೆ
ಗೋಳಿ ಬಜೆ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು
- ಮೈದಾಹಿಟ್ಟು - 1 ಬಟ್ಟಲು
- ಮೊಸರು - 1 ಬಟ್ಟಲು
- ಸಕ್ಕರೆ ಪುಡಿ - ಅರ್ಧ ಚಮಚ
- ಅಡುಗೆ ಸೋಡಾ - ಸ್ವಲ್ಪ
- ಉಪ್ಪು- ರುಚಿಗೆ ತಕ್ಕಷ್ಟು
- ಎಣ್ಣೆ - ಕರಿಯಲು
ಮಾಡುವ ವಿಧಾನ...
- ಮೈದಾ ಹಿಟ್ಟಿಗೆ ಅಡುಗೆ ಸೋಡಾ, ಉಪ್ಪು, ಸಕ್ಕರೆ ಪುಡಿ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಬೇಕು.
- ನಂತರ ಇದಕ್ಕೆ ಮೊಸರು ಹಾಕಿ ಗಟ್ಟಿಯಾಗಿ ಕಲೆಸಿಕೊಳ್ಳಬೇಕು. ಇಡ್ಲಿ ಹಿಟ್ಟಿನಂತೆ ಗಟ್ಟಿ ಇರಬೇಕು.
- ನಂತರ ಹಿಟ್ಟನ್ನು 4 ಗಂಟೆಗಳ ಕಾಲ ನೆನೆಯಲು ಬಿಡಬೇಕು. ಒಲೆಯ ಮೇಲೆ ಬಾಣಲೆಯನ್ನು ಇಟ್ಟು ಎಣ್ಣೆ ಕಾಯಲು ಬಿಡಬೇಕು.
- ಎಣ್ಣೆ ಕಾದ ನಂತರ ಚೆನ್ನಾಗಿ ನೆನೆದ ಹಿಟ್ಟನ್ನು ಉಂಡೆ ಮಾಡಿ ಚಿನ್ನದ ಬಣ್ಣ ಬರುವವರೆಗೆ ಕರಿದರೆ ರುಚಿಕರ ಗೋಳಿ ಬಜೆ ತಯಾರಾಗುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.