ಮಂಗಳೂರು ಬಜ್ಜಿ
ಮಂಗಳೂರು ಬಜ್ಜಿ (ಗೋಲಿಬಾಜೆ) ಮಾಡುವ ವಿಧಾನ
ಬೇಕಾಗುವ ಪದಾರ್ಥಗಳು
- ಮೈದಾ ಹಿಟ್ಟು 1 ಕಪ್
- ಮೊಸರು ಅರ್ಧ ಕಪ್
- ಶುಂಠಿ 1 ಇಂಚು
- ಹಸಿರು ಮೆಣಸಿನಕಾಯಿ-2
- ಕರಿಬೇವು ಸೊಪ್ಪು, ಹೆಚ್ಚಿದ ತೆಂಗಿನಕಾಯಿ
- ಉಪ್ಪು, ಅಡುಗೆ ಸೋಡಾ
- ಕರಿಯಲು ಅಡುಗೆ ಎಣ್ಣೆ
ಮಾಡುವ ವಿಧಾನ
- ಮೊದಲಿಗೆ ಮೈದಾ ಹಿಟ್ಟಿಗೆ ಮೊಸರು ಹಾಕಿ ಗಂಡು ಬರದಂತೆ ಚೆನ್ನಾಗಿ ಕಲೆಸಿ 2 ಗಂಟೆ ನೆನೆಯಲು ಬಿಡಿ.
- ಕಲೆಸಿದ ಮಿಶ್ರಣ ಇಡ್ಲಿ ಹಿಟ್ಟಿನ ಹದಕ್ಕೆ ಬರಬೇಕು
- ನಂತರ ನೆನೆದ ಹಿಟ್ಟಿಗೆ ಸಣ್ಣಗೆ ಹೆಚ್ಚಿದ ಹಸಿ ಮೆಣಸಿನಕಾಯಿ, ಶುಂಠಿ, ಕರಿಬೇವು ಸೊಪ್ಪು, ತೆಂಗಿನ ಕಾಯಿ ಪೀಸ್,ಹಾಕಿ ಮಿಕ್ಸ್ ಮಾಡಿ.
- ಆಮೇಲೆ ಅದಕ್ಕೆ ಸ್ವಲ್ಪ ಅಡುಗೆ ಸೋಡಾ ಹಾಗೂ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಕಲೆಸಿ.
- ನಂತರ ಸ್ಟವ್ ಹಚ್ಚಿ, ಒಂದು ಬಾಣಲೆಗೆ ಎಣ್ಣೆ ಹಾಕಿ ಕಾಯಿಸಿ,
- ಕಾದ ಎಣ್ಣೆಗೆ ಸಣ್ಣ ಸಣ್ಣ ಉಂಡೆಗಳಾಗಿ ಮಾಡಿ ಸಣ್ಣ ಉರಿಯಲ್ಲಿ ಬೇಯಿಸಿ.
- ಗೋಲ್ಡನ್ ಬ್ರೌನ್ ಬಣ್ಣ ಬರುವವರೆಗೂ ಫ್ರೈ ಮಾಡಿ
- ಬಿಸಿ ಇರುವಾಗಲೇ ತೆಂಗಿನ ಕಾಯಿ ಚಟ್ನಿ ಜೊತೆ ಸವಿಯಿರಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.