ಬೆಂಡೆಕಾಯಿಯನ್ನು ಚೆನ್ನಾಗಿ ತೊಳೆದು, ಒರೆಸಿ ನಂತರ ಅದನ್ನು ಸಣ್ಣದಾಗಿ ಕತ್ತರಿಸಿಕೊಳ್ಳಬೇಕು.
ಒಂದು ಪಾತ್ರೆಗೆ ಕಡ್ಲೆಹಿಟ್ಟು, ಖಾರದ ಪುಡಿ, ಓಮಕಾಳು ಮತ್ತು ಉಪ್ಪು, ಅಕ್ಕಿ ಹಿಟ್ಟು, ಕತ್ತರಿಸಿದ ಬೆಂಡೆಕಾಯಿ ಹಾಗೂ ಈರುಳ್ಳಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ಇದಕ್ಕೆ ಒಂದೆರಡು ಚಮಚ ಕಾದ ಎಣ್ಣೆ ಹಾಗೂ ಸ್ವಲ್ಪ ನೀರು ಹಾಕಿ ಚೆನ್ನಾಗಿ ಕಲಸಿಕೊಳ್ಳಬೇಕು.
ಬಾಣಲೆಗೆ ಎಣ್ಣೆ ಹಾಕಿ ಕಾಯಲು ಬಿಡಿ. ಎಣ್ಣೆ ಚೆನ್ನಾಗಿ ಕಾದ ನಂತರ ಬೆಂಡೆಕಾಯಿಯನ್ನು ಹಾಕಿ ಚಿನ್ನದ ಬಣ್ಣ ಬರುವವರೆಗೆ ಕರಿದು ತೆಗೆದರೆ, ಗರಿಗರಿಯಾದ ಬೆಂಡೆಕಾಯಿ ಪಕೋಡ ತಿನ್ನಲು ಸಿದ್ಧವಾಗುತ್ತದೆ.