ಸಬ್ಬಕ್ಕಿ ದೋಸೆ
ಸಬ್ಬಕ್ಕಿ ದೋಸೆ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು
- ಸಬ್ಬಕ್ಕಿ - ಅರ್ಧ ಬಟ್ಟಲು
- ಅಕ್ಕಿ ಹುಡಿ - ಅರ್ಧ ಬಟ್ಟಲು
- ಮೊಸರು - ಅರ್ಧ ಬಟ್ಟಲು
- ಹಸಿಮೆಣಸಿಕಾಯಿ - 2-3
- ಕೊತ್ತಂಬರಿ ಸೊಪ್ಪು - ಸ್ವಲ್ಪ
- ತುರಿದ ಕ್ಯಾರೆಟ್ - ಸ್ವಲ್ಪ
- ಈರುಳ್ಳು - 2
- ತೆಂಗಿನಕಾಯಿ ತುರಿ - ಅರ್ಧ ಬಟ್ಟಲು
- ಉಪ್ಪು - ರುಚಿಗೆ ತಕ್ಕಷ್ಟು
- ಎಣ್ಣೆ - ಸ್ವಲ್ಪ
ಮಾಡುವ ವಿಧಾನ...
- ಸಬ್ಬಕ್ಕಿಯನ್ನು 3-4 ಗಂಟೆಗಳ ಕಾಲ ನೆನೆಸಿಟ್ಟುಕೊಳ್ಳಬೇಕು. ನಂತರ ಇದನ್ನು ಚೆನ್ನಾಗಿ ತೊಳೆದುಕೊಳ್ಳಬೇಕು.
- ಈರುಳ್ಳಿ, ಕೊತ್ತಂಬರಿ ಸೊಪ್ಪು, ಹಸಿಮೆಣಸಿಕಾಯಿ ಹಾಗೂ ಕರಿಬೇವಿನಸೊಪ್ಪನ್ನು ಸಣ್ಣದಾಗಿ ಹೆಚ್ಚಿಕೊಳ್ಳಬೇಕು.
- ನೆನೆಸಿ, ತೊಳೆದ ಸಬ್ಬಕ್ಕಿಯನ್ನು ಮಿಕ್ಸಿಗೆ ಹಾಕಿ ಒಂದು ಸುತ್ತು ರುಬ್ಬಿಕೊಳ್ಳಬೇಕು. ನಂತರ ಇದಕ್ಕೆ ಸ್ವಲ್ಪ ಮೊಸರು, ಅಕ್ಕಿಹುಡಿ, ತೆಂಗಿನ ತುರಿ ಮತ್ತು ಉಪ್ಪು ಹಾಕಿ ಚೆನ್ನಾಗಿ ಕಲಸಿಕೊಳ್ಳಬೇಕು. ಅಗತ್ಯವೆನಿಸಿದರೆ ಸ್ವಲ್ಪ ನೀರನ್ನು ಮಿಶ್ರಣ ಮಾಡಿಕೊಳ್ಳಬಹುದು.
- ನಂತರ ಹೆಚ್ಚಿಟ್ಟುಕೊಂಡ ಈರುಳ್ಳಿ, ಕೊತ್ತಂಬರಿ ಸೊಪ್ಪು, ಹಸಿಮೆಣಸಿಕಾಯಿ ಹಾಗೂ ಕರಿಬೇವಿನಸೊಪ್ಪನ್ನು ಹಿಟ್ಟಿಗೆ ಮಿಶ್ರಣ ಮಾಡಿಕೊಳ್ಳಬೇಕು.
- ಒಲೆಯ ಮೇಲೆ ತವಾ ಇಟ್ಟು ಬಿಸಿಯಾದಾಗ ಸ್ವಲ್ಪ ಎಣ್ಣೆ ಹಾಕಿ ದೋಸೆ ಹಿಟ್ಟನ್ನು ಹಾಕಬೇಕು.
- ನಂತರ ದೋಸೆಯನ್ನು 2-3 ನಿಮಿಷಗಳ ಕಾಲ ಎರಡು ಬದಿಯಲ್ಲೂ ಬೇಯಿಸಿದರೆ, ರುಚಿಕರವಾದ ಸಬ್ಬಕ್ಕಿ ದೋಸೆ ತಯಾರಾಗುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.