ಸೋಯಾ ಬೀನ್ ಕಬಾಬ್
ಸೋಯಾ ಬೀನ್ ಕಬಾಬ್ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು
- ಸೋಯಾ ಬೀನ್ - 10-20
- ಶುಂಠಿ - ಸ್ವಲ್ಪ
- ಬೆಳ್ಳುಳ್ಳಿ- ಸ್ವಲ್ಪ
- ಹಸಿ ಮೆಣಸಿನಕಾಯಿ - 6
- ಈರುಳ್ಳಿ - 1
- ಕೊತ್ತಂಬರಿ ಸೊಪ್ಪು - ಸ್ವಲ್ಪ
- ಖಾರದ ಪುಡಿ - ಅರ್ಧ ಚಮಚ
- ಗರಂ ಮಸಾಲ - 1 ಚಮಚ
- ಕರಿ ಮೆಣಸಿನ ಪುಡಿ - ಅರ್ಧ ಚಮಚ
- ಎಣ್ಣೆ - ಸ್ವಲ್ಪ
- ಮೊಸರು - 3-4 ಚಮಚ
- ಉಪ್ಪು - ರುಚಿಗೆ ತಕ್ಕಷ್ಟು
ಮಾಡುವ ವಿಧಾನ...
- ಸೋಯಾ ಬೀನ್ ಅನ್ನು ಬಿಸಿ ನೀರಿನಲ್ಲಿ 10 ನಿಮಿಷ ನೆನೆಹಾಕಬೇಕು.
- ನಂತರ ಅದಕ್ಕೆ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಹಾಕಬೇಕು.
- ಹಸಿಮೆಣಸಿನಕಾಯಿ, ಈರುಳ್ಳಿ, ಕೊತ್ತಂಬರಿ ಸೊಪ್ಪನ್ನು ರುಬ್ಬಿಕೊಳ್ಳಬೇಕು. ನಂತರ ಇದನ್ನು ಸೋಯಾ ಬೀನ್ ಗೆ ಹಾಕಿ. ನಂತರ ಖಾರದ ಪುಡಿ, ಗರಂ ಮಸಾಲ, ಮೊಸರು ಹಾಗೂ ಮೆಣಸಿನ ಪುಡಿ ಮತ್ತು ಉಪ್ಪು ಹಾಕಿ ಎಲ್ಲವನ್ನು ಚೆನ್ನಾಗಿ ಮಿಶ್ರಣ ಮಾಡಬೇಕು.
- ಇದಾನಂತರ ಒಲೆಯ ಮೇಲೆ ಬಾಣಲೆ ಇಟ್ಟು, ಅದಕ್ಕೆ ಸ್ವಲ್ಪ ಎಣ್ಣೆ ಹಾಕಿ, ಬಿಸಿಯಾದ ನಂತರ ಇದಕ್ಕೆ ಮಸಾಲೆ ಮಿಶ್ರಿತ ಸೋಯಾಬೀನ್ ಅನ್ನು ಹಾಕಿ 10 ನಿಮಿಷ ಫ್ರೈ ಮಾಡಿದರೆ ರುಚಿಕರವಾದ ಸೋಯಾಬೀನ್ ಕಬಾಬ್ ಸಿದ್ಧವಾಗುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.