ಆಲೂ ಕಬಾಬ್
ಆಲೂ ಕಬಾಬ್ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು...
- ಬೇಯಿಸಿದ ಆಲೂ ಗಡ್ಡೆ- ಸ್ವಲ್ಪ
- ಮೈದಾಹಿಟ್ಟು- 4 ಚಮಚ
- ಕಡಲೆಹಿಟ್ಟು - 4 ಚಮಚ
- ರವೆ - ಕಾಲು ಬಟ್ಟಲು
- ಶುಂಠಿ - ಸ್ವಲ್ಪ
- ಬೆಳ್ಳುಳ್ಳಿ-6
- ಕೊತ್ತಂಬರಿ ಸೊಪ್ಪು- ಸ್ವಲ್ಪ
- ಪುದೀನ - ಸ್ವಲ್ಪ
- ಗರಂ ಮಸಾಲೆ - ಸ್ವಲ್ಪ
- ಜೀರಿಗೆ - ಸ್ವಲ್ಪ
- ಹಸಿ ಮೆಣಸಿನಕಾಯಿ - 3
- ಉಪ್ಪು - ರುಚಿಗೆ ತಕ್ಕಷ್ಟು
- ಎಣ್ಣೆ - ಕರಿಯಲು
ಮಾಡುವ ವಿಧಾನ...
- ಮೊದಲು ಶುಂಠಿ, ಬೆಳ್ಳುಳ್ಳಿ, ಕೊತ್ತಂಬರಿ ಸೊಪ್ಪು ಹಾಗೂ ಪುದೀನ, ಗರಂ ಮಸಾಲೆ, ಅರ್ಧ ಚಮಚ ಜೀರಿಗೆ, ಹಸಿಮೆಣಸಿನ ಕಾಯಿ ಎಲ್ಲವನ್ನೂ ಜಾರ್ ಗೆ ಹಾಕಿ ತರಿತರಿಯಾಗಿ ರುಬ್ಬಿಕೊಳ್ಳಬೇಕು.
- ಮತ್ತೊಂದೆಡೆ ಒಂದು ಪಾತ್ರೆಯಲ್ಲಿ ಬೇಯಿಸಿಕೊಂಡ ಆಲೂಗಡ್ಡೆ, ಉಪ್ಪು, ಕಡಲೆ ಹಿಟ್ಟು ಹಾಗೂ ರುಬ್ಬಿದ ಮಿಶ್ರಣವನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು.
- ಮತ್ತೊಂದು ಪಾತ್ರೆಯಲ್ಲಿ ಮೈದಾಹಿಟ್ಟಿಗೆ ನೀರು ಸೇರಿಸಿ ತೆಳ್ಳಗೆ ಮಾಡಿಕೊಳ್ಳಬೇಕು. ಆಲೂಗಡ್ಡೆಯ ಮಿಶ್ರಣವನ್ನು ಮೈದಾಹಿಟ್ಟಿನಲ್ಲಿ ಅದ್ದಿ ನಂತರ ರವೆಯಲ್ಲಿ ಹೊರಳಿಸಿ ಒಂದು ತಟ್ಟೆಯಲ್ಲಿಟ್ಟುಕೊಳ್ಳಬೇಕು.
- ನಂತರ ಒಲೆಯ ಮೇಲೆ ಬಾಣಲೆ ಇಟ್ಟು. ಎಣ್ಣೆ ಹಾಕಿ ಚೆನ್ನಾಗಿ ಕಾಯಲು ಬಿಡಬೇಕು.
- ಎಣ್ಣೆ ಕಾದ ನಂತರ ಉಂಡೆ ಮಾಡಿಕೊಂಡ ಆಲೂ ಮಿಶ್ರಣವನ್ನು ಹಾಕಿ ಚಿನ್ನದ ಬಣ್ಣ ಬರುವವರೆಗೆ ಕರಿದರೆ ಆಲೂ ಕಬಾಬ್ ತಯಾರಾಗುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.