ಚಿಕನ್ ಪೆಪ್ಪರ್ ಡ್ರೈ
ಚಿಕನ್ ಪೆಪ್ಪರ್ ಡ್ರೈ ಮಾಡುವ ವಿಧಾನ...
ಬೇಕಾಗುವ ಪದಾರ್ಥಗಳು...
- ಚಿಕನ್ - 1ಕೆಜಿ
- ಶುಂಠಿ, ಬೆಳ್ಳುಳ್ಳಿ ಪೇಸ್ಟ್ - ಸ್ವಲ್ಪ
- ಗರಂ ಮಸಾಲ - ಅರ್ಥ ಚಮಚ
- ಟೊಮೆಟೊ- 2
- ಈರುಳ್ಳಿ - 2
- ಅರಿಶಿಣ ಪುಡಿ - ಸ್ವಲ್ಪ
- ಕೊತ್ತಂಬರಿ ಸೊಪ್ಪು - ಸ್ವಲ್ಪ
- ಕಾಳು ಮೆಣಸಿನ ಪುಡಿ - 3-4 ಚಮಚ
- ಹಸಿಮೆಣಸಿನ ಕಾಯಿ - 2
- ಕರಿಬೇವಿನ ಎಲೆ - ಸ್ವಲ್ಪ
- ಎಣ್ಣೆ - ಕರಿಯಲು
- ಉಪ್ಪು - ರುಚಿಗೆ ತಕ್ಕಷ್ಟು
ಮಾಡುವ ವಿಧಾನ...
- ಕೋಳಿ ಮಾಂಸವನ್ನು ತೊಳೆದು ಅದಕ್ಕೆ ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಗರಂ ಮಸಾಲ ಪುಡಿ, ಕಾಳು ಮೆಣಸಿನ ಪುಡಿ, ಅರಿಶಿಣದ ಪುಡಿ ಹಾಗೂ ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ 1 ಗಂಟೆಗಳ ಕಾಲ ನೆನೆಯಲು ಬಿಡಬೇಕು.
- ನಂತರ ಬಾಣಲೆಗೆ ಅರ್ಥದಷ್ಟು ಎಣ್ಣೆ ಹಾಕಿ ಕಾಯಿಸಬೇಕು. ಕಾದ ಎಣ್ಣೆಗೆ ಮಸಾಲೆ ಮಿಶ್ರಿತ ಚಿಕನ್ ಹಾಕಿ ಸ್ವಲ್ಪ ಕಂದು ಬಣ್ಣ ಬರುವಾಗ ತೆಗೆಯಬೇಕು.
- ನಂತರ ಪಾತ್ರೆಯೊಂದಕ್ಕೆ ಸ್ವಲ್ಪ ಎಣ್ಣೆ ಹಾಕಿ ಅದಕ್ಕೆ ಜಜ್ಜಿದ ಶುಂಠಿ, ಬೆಳ್ಳುಳ್ಳಿ, ಹಸಿ ಮೆಣಸಿನಕಾಯಿ, ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗ ಹುರಿದು ಟೊಮೆಟೊ ಹಾಕಿ ನಂತರ ಎಣ್ಣೆಯಲ್ಲಿ ಕರಿದ ಮಾಂಸವನ್ನು ಹಾಕಿ ಮಿಶ್ರಣ ಮಾಡಿದರೆ ಚಿಕನ್ ಪೆಪ್ಪರ್ ಡ್ರೈ ಸವಿಯಲು ಸಿದ್ಧವಾಗುತ್ತದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.